Shubhashaya News

‘ದುಡಿಯೋಣ ಬಾ’ಅಭಿಯಾನಕ್ಕೆ ಚಾಲನೆ

ಯಲಬುರ್ಗಾ: ತಾಲೂಕಿನ ಗೆದಗೇರಿ ಗ್ರಾಮ ಪಂಚಾತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿಯ ನರೇಗಾ ಯೋಜನೆಯಡಿ ದುಡಿಯೋಣ ಬಾ ಅಭಿಯಾನಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ನಿಂಗಮ್ಮ ಕಲ್ಲಪ್ಪ ಕಲ್ಲೂರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡುವ ಉದ್ದೇಶದಿಂದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಈ ಅಭಿಯಾನವನ್ನು ಪ್ರಾರಂಭಿಸಿದ್ದು, ಕೂಲಿಕಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಮಗಾರಿಗಳ ಬೇಡಿಕೆ ಕೂಲಿ ಬೇಡಿಕೆಗಳನ್ನು ನೀಡಲು ಒಳ್ಳೆಯ ಅವಕಾಶ ನೀಡಿದ್ದಾರೆ. ಅದರಂತೆ ಗ್ರಾಮ ಪಂಚಾಯತಿಯ ಎಲ್ಲಾ ಗ್ರಾಮಗಳಲ್ಲಿ ಈಗಾಗಲೇ 2020-21 ನೇ ಸಾಲಿನಲ್ಲಿ ನಾಲಾ ಸುಧಾರಣೆ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, 2021-22 ನೇ ಸಾಲಿನಲ್ಲಿ ಎಲ್ಲಾ ಗ್ರಾಮಗಳಲ್ಲಿ ಬದು ನಿರ್ಮಾಣ ಕಾಮಗಾರಿ ನಿರ್ವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶರಣಪ್ಪ ಕೊಪ್ಪದ್, ಪಿಡಿಒ ವೀರಭದ್ರಪ್ಪ ಮೂಲಿಮನಿ ಸದಸ್ಯರಾದ ಶರಣಪ್ಪ ತೋಟದ್, ಶರಣಪ್ಪ ಪೋಲಿಸ್ ಪಾಟೀಲ್, ತಿರುಪತಿ ಬಸರಿಗಿಡದ್, ನಾಗರಾಜ ನಾಯಕ್, ಸಿಬ್ಬಂದಿ ಕಳಕಯ್ಯ ಹಿರೇಮಠ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Leave A Reply

Your email address will not be published.