Shubhashaya News

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ ಘೋರ ದುರಂತ : 9 ಜನರು ಸ್ಥಳದಲ್ಲೇ ಸಾವು, 15 ಕ್ಕೂ ಹೆಚ್ಚು ಮಂದಿಗೆ ಗಾಯ.!

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಎಲಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಐಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ಲಭ್ಯವಾಗಿದೆ.

Leave A Reply

Your email address will not be published.