ಆಳಂದ: ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿಇಟಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಯಜ್ಞೋಪವೀತ ಜನಿವಾರ ಬಿಚ್ಚಿಸುವ ಅಧಿಕಾರಿಗಳ ಕೃತ್ಯಕ್ಕೆ ಆಳಂದ ತಾಲೂಕು ಬ್ರಾಹ್ಮಣ ಸಂಘ ಖಂಡಿಸುತ್ತದೆ ಎಂದು ಬ್ರಾಹ್ಮಣ ಸಂಘದ ಅಧ್ಯಕ್ಷ ವಿಜಯಕುಮಾರ ಕೋಥಳಿಕರ ಅವರು ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ಬೀದರ, ಶಿವಮೊಗ್ಗದ ಪರೀಕ್ಷಾ ಕೇಂದ್ರಗಳಲ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕಾಲೇಜಿನ ಒಳಗೆ ತೆರಳುವ ಸಮಯದಲ್ಲಿ ಅಲ್ಲಿನ ಸಿಬ್ಬಂದಿಗಳು ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿದ್ದಾರೆ. ಇದು ಸನಾತನ ಹಿಂದು ಧರ್ಮದ ಭಾಗವಾದ ಬ್ರಾಹ್ಮಣ ಸಮಾಜಕ್ಕೆ ಮಾಡಿದ ಅವಮಾನ, ಉದ್ದೇಶ ಪೂರ್ವಕವಾಗಿ ಮಾಡಲಾದ ಈ ಕೃತ್ಯವನ್ನು ಬ್ರಾಹ್ಮಣ ಸಮಾಜವು ಬಲವಾಗಿ ಖಂಡಿಸುತ್ತದೆ ಎಂದು ಆಕ್ರೋಶ ಹೊರಹಾಕಿದರು.
ಕೂಡಲೇ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ ಕಾಗೂ ಪರೀಕ್ಷೆ ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಪ್ಪಿಸ್ಥರ ಅಧಿಕಾರಿಗಳ, ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ವಿದ್ಯಾರ್ಥಿಗಳನ್ನು ಮರು ಪರೀಕ್ಷೆಗೆ ಬರೆಯುವಂತೆ ಅವಕಾಶ ಕಲ್ಪಿಸಬೇಕು ಹಾಗೂ ಅದೇ ರೀತಿ ಕಳೆದ ವರ್ಷ ಶಂಕರಾಚಾರ್ಯರ ಜಯಂತಿ ಆಳಂದ ತಾಲೂಕು ಆಡಳಿತ ಅಧಿಕಾರಿಗಳು ಕೇವಲ ಕಾಟಾಚಾರಕ್ಕೆ ಗ್ರೂಪ ಡಿ ನೌಕರರನಿಂದ ಪೂಜೆ ಸಲ್ಲಿಸಿ ನಮ್ಮ ಸಮಾಜದ ಭಾಂದವರನ್ನು ಕರೆಸದೇ ಅವಮಾನ ಇಡೀ ಬ್ರಾಹ್ಮಣ ಸಮಾಜವನ್ನು ಅವಮಾನನಿಸಿದ್ದಾರೆ, ಈ ಕುರಿತು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಪತ್ರವನ್ನು ತಹಶೀಲ್ದಾರರಿಗೆ ಸಲ್ಲಿಸಿದರು ಕೂಡಾ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇರುವುದು ಖೇದವಾಗಿದೆ ಎಂದು ಹೇಳಿದರು. ಇದೇ ರೀತಿ ಸಮಾಜಕ್ಕೆ ಅನ್ಯಾಯ ಆಗುತ್ತಿದ್ದರೆ, ಜಿಲ್ಲೆ ಸೇರಿ ರಾಜ್ಯದಾದ್ಯಂತ ಸಮಾಜ ಮತ್ತು ಸಂಘಟನೆಯವರು ಉಗ್ರವಾದ ಪ್ರತಿಭಟನೆ ಮಾಡಬೇಕಾಗುತ್ತದೆ ಎಚ್ಚರಿಸಿದ್ದಾರೆ.