Shubhashaya News

ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಈಗಾಗಲೇ ಮುಸ್ಲಿಮರಿಗೆ ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಒದಗಿಸಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೆ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದ್ದು ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 10ರಷ್ಟು ಇದ್ದಂತಹ ಮೀಸಲಾತಿಯನ್ನು ಶೇಕಡ 15ಕ್ಕೆ ಏರಿಸುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಹೌದು ಮತ್ತೆ ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ. ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲೂ ಈ ವಿಷಯದ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ವಸತಿ ಮೀಸಲಾತಿ ಹೆಚ್ಚಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ತಮ್ಮ ಸಮುದಾಯಕ್ಕೆ ವಸತಿ ಯೋಜನೆ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ಜಮೀರ್ ಅಹ್ಮದ್ ಪ್ರಸ್ತಾಪಿಸುವ ಸಾಧ್ಯತೆ ಇದೆ. ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 10 ರಷ್ಟು ಮೀಸಲಾತಿ ಇದೆ. ಈ ಯೋಜನೆ ಮೀಸಲಾತಿ ಶೇಕಡ 15ಕ್ಕೆ ಹೆಚ್ಚಿಸುವ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಕುರಿತು ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

Comments are closed.

Don`t copy text!