Shubhashaya News

ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

ಮೇ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಏನೂ ಇಲ್ಲ. ಈಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಏನೂ ಇಲ್ಲ. ಈಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ,ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ತಿಳಿಸಿದ್ದಾರೆ.

Comments are closed.

Don`t copy text!