Shubhashaya News

ಶ್ರೀರಾಮುಲು-ಜನಾರ್ದನರೆಡ್ಡಿ ಮುನಿಸು ಶಮನಕ್ಕೆ ಹೈಕಮಾಂಡ್ ಎಂಟ್ರಿ : ದೆಹಲಿಗೆ ಬರುವಂತೆ ಸೂಚನೆ.!

ಮಾಜಿ ಸಚಿವ ಶ್ರೀರಾಮುಲು-ಜನಾರ್ದನ ರೆಡ್ಡಿ ಮುನಿಸು ಶಮನಕ್ಕೆ ಹೈಕಮಾಂಡ್ ಎಂಟ್ರಿ ಕೊಟ್ಟಿದ್ದು, ದೆಹಲಿಗೆ ಬರುವಂತೆ ಸೂಚನೆ ನೀಡಿದೆ.

ಶ್ರೀರಾಮುಲು-ಜನಾರ್ದನ ರೆಡ್ಡಿ ಅವರ ಮುನಿಸು ಶಮನಕ್ಕೆ ಹೈಕಮಾಂಡ್ ಎಂಟ್ರಿ ಕೊಟ್ಟಿದೆ. ಹೀಗಾಗಿ ದೆಹಲಿಗೆ ಬರುವಂತೆ ಇಬ್ಬರೂ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ.

ನಿನ್ನೆ ಬಳ್ಳಾರಿಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅವರು ರಾಮುಲು ಅವರನ್ನು ಭೇಟಿಯಾಗಿದ್ದರು. ದೆಹಲಿಗೆ ಬರುವಂತೆ ಶ್ರೀರಾಮುಲುಗೆ ಸೂಚನೆ ನೀಡಿದ್ದಾರೆ.

ಕಳೆದ ಒಂದು ವರ್ಷದಿಂದ ಶ್ರೀರಾಮುಲು, ಜನಾರ್ದನ ರೆಡ್ಡಿ ಮುನಿಸಿಕೊಂಡಿದ್ದಾರೆ ಬಹಿರಂಗವಾಗಿ ಇಬ್ಬರು ನಾಯಕರಿಂದ ಪರಸ್ಪರ ಆರೋಪ- ಪ್ರತ್ಯಾರೋಪ ಕೇಳಿ ಬರುತ್ತಿದ್ದು, ಇಬ್ಬರನ್ನು ಒಂದುಗೂಡಿಸಲು ರಾಜ್ಯ ಬಿಜೆಪಿ ನಾಯಕರು ಪ್ರಯತ್ನ ನಡೆಸಿದ್ದರು.

ನಿನ್ನೆ ಬಳ್ಳಾರಿಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಶ್ರೀರಾಮುಲು ಅವರನ್ನು ಭೇಟಿಯಾಗಿ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ನಿನ್ನೆ ಬಳ್ಳಾರಿಯಲ್ಲಿ ಇಲ್ಲದ ಕಾರಣ ಜನಾರ್ದನ ರೆಡ್ಡಿ ಅವರಿಗೆ ಫೋನ್ ಮಾಡಿದ್ದ ವಿ. ಸೋಮಣ್ಣ ನೀವು ಮತ್ತು ಶ್ರೀರಾಮುಲು ಇಬ್ಬರೂ ದೆಹಲಿಗೆ ಬನ್ನಿ ಎಂದು ಹೇಳಿದ್ದಾರೆ.

Comments are closed.

Don`t copy text!