Shubhashaya News

ಕೋರೋನಾ ಮುಂಜಾಗೃತ ವಹಿಸಲು ಹರ್ಷಾನಂದ ಗುತ್ತೇದಾರ ಮನವಿ

ತಾಲೂಕಿನಲ್ಲಿ ಹಲವು ದಿನಗಳಿಂದ ಕೋರೋನಾ ಪ್ರಕರಣಗಳು ವ್ಯಾಪಕವಾಗಿ ಕಂಡು ಬರುತ್ತಿರುವುದರಿಂದ ತಾಲೂಕಿನ ಜನತೆ ಮುಂಜಾಗೃತಾ ಕ್ರಮವಹಿಸಿಕೊಳ್ಳಲು ಮುಂದಾಗಬೇಕು ಎಂದು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಗಡಿಗ್ರಾಮಗಳು ಸೇರಿದಂತೆ ಅನೇಕ ಗ್ರಾಮಗಳಲ್ಲಿ ವ್ಯಾಪಕವಾಗಿ ವೈರಸ್ ಹಬ್ಬುತ್ತಿದೆ ಇದಕ್ಕೆ ಮುಂಜಾಗೃತಾ ಕ್ರಮಗಳೇ ಮದ್ದಾಗಿವೆ ಆದರಿಂದ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಸ್ಯಾನಿಟೈಜರ್ ಬಳಸುವುದು ನಿಯಮಿತವಾಗಿ ಮಾಡಬೇಕೆಂದು ತಿಳಿಸಿದ್ದಾರೆ.
ಸಮೀಪದ ಆರೋಗ್ಯ ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಬೇಕು ಮನವಿ ಮಾಡಿಕೊಂಡಿದ್ದಾರೆ.

Leave A Reply

Your email address will not be published.