ಆಳಂದ: ಬೇಡಿಕೆಗೆ ಕೆಡಿಎಸ್ಎಸ್ ಸಮಿತಿ ಕಾರ್ಯಕರ್ತರು ತಹಸೀಲ್ದಾರ ಅಣ್ಣಾರಾವ್ ಪಾಟೀಲ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಆಳಂದ: ಪರಿಶಿಷ್ಟ ಜಾತಿ ಹಾಗೂ ಭೂರಹಿತ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿ ದರಖಾಸ್ತು ಮಂಜೂರಾತಿ ಸಕ್ರಮೀಕರಣ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು ಎಂಬ ಪ್ರಮುಖ ಬೇಡಿಕೆ ಈಡೇರಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ತಾಲೂಕು ಸಮಿತಿ ಒತ್ತಾಯಿಸಿದೆ.
ಈ ಕುರಿತು ತಹಸೀಲ್ದಾರ ಅಣ್ಣಾರಾವ್ ಪಾಟೀಲ ಅವರಿಗೆ ಸಮಿತಿ ಸಂಚಾಲಕ ಶರಣಬಸಪ್ಪ ಕಸನಕರ ನೇತೃತ್ವದಲ್ಲಿ ಪ್ರಮುಖರು ಮನವಿ ಸಲ್ಲಿಸಿ ಬೇಡಿಕೆಗೆ ಆಗ್ರಹಿಸಿದರು.
ವಿನಾಕಾರಣ ವಜಾಗೊಳಿಸುವ ಬಗರ ಹುಕುಂ ಅರ್ಜಿಗಳನ್ನು ಮರುಪರಿಶೀಲನೆ ಮಾಡಬೇಕು, ಪರಿಶಿಷ್ಟ ಪಿ.ಟಿ.ಸಿ. ಎಲ್. ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು ಪಿಟಿಸಿಎಲ್ ಪ್ರಕರಣಗಳು ವಜಾಗೊಳ್ಳುತ್ತಿದ್ದು ನುರಿತ ಹಿರಿಯ ವಕೀಲರನ್ನು ನೇಮಿಸಿ ಈ ಪ್ರಕರಣಗಳನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು 20-30 ವರ್ಷಗಳಿಂದ ಸಾಗುವಳಿ ಮಾಡಿದ ಎಲ್ಲಾ ರೈತರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟರ ಮೇಲಿನ ದೌರ್ಜನ್ಯಪ್ರಕರಣ ನಿರ್ವಹಣೆಗೆ ಸರ್ಕಾರ ಸ್ಥಾಪಿಸಿರುವ ಡಿಸಿಆರ್ಇ ಪೆÇಲೀಸ್ ಠಾಣೆಗಳಿಗೆ ಅಗತ್ಯವಿರುವ ಸಿಬ್ಬಂದಿ ಮತ್ತು ಮೂಲಭೂತ ಸೌಕರ್ಯ ಒದಗಿಸಬೇಕು ಎಸ್ಪಿಸಿಎಸ್ಪಿ-ಟಿಎಸ್ಪಿ ನಿರ್ವಹಣೆಗೆ ಪ್ರತ್ಯೇಕ ನಿರ್ದೇಶನಲಯ ಅಥವಾ ಏಕಗವಾಕ್ಷಿ ಯೋಜನೆ ವ್ಯವಸ್ಥೆ ಜಾರಿಗೆ ಗೊಳಿಸಬೇಕು ಮತ್ತು ಸಮಾಜ ಕಲ್ಯಾಣ ಇಲಾಖೆ ಅಡಿಯ ವಿದ್ಯಾರ್ಥಿ ನಿಲಯಗಳನ್ನು ಉನ್ನತಿಕರಣಗೊಳಿಸಿ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲಿ ಸಂಚಾಲಕ ಶರಣಬಸಪ್ಪ ಕಸನಕರ, ಹೊನ್ನಪ್ಪ ಹಾಗರಗಿ, ಸಂಘಟನಾ ಸಂಚಾಲಕ ಜೈಭೀಮ್ ಹರಸೂರೆ, ದತ್ತಾ ಮೇಲಿನಕೇರಿ, ಅರ್ಜುನ್ ಸಪರ್ಂಚ್ ಉಪಸ್ಥಿತರಿದ್ದರು.
Comments are closed.