ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಆಗಸ್ಟ್ 16 ರಂದು ಫೇಸ್‌ಬುಕ್ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌ರವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದಾರೆ.
ಈ ಹಿನ್ನೆಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
Comments are closed.