Shubhashaya News

ಆಳಂದ ತಾಲ್ಲೂಕು ದಸರಾ ಕ್ರೀಡಾಕೂಟಕ್ಕೆ ಸಜ್ಜು

ಆಳಂದ: 2025-26ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆಗಸ್ಟ್ 23, 2025 ರಂದು ಆಳಂದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಕಬಡ್ಡಿ, ಥೋಬಾಲ್ ಹಾಗೂ ಯೋಗಾ ಸ್ಪರ್ಧೆಗಳು ನಡೆಯಲಿದ್ದು, ಪುರುಷರು ಮತ್ತು ಮಹಿಳೆಯರು ಭಾಗವಹಿಸಲು ಅವಕಾಶವಿದೆ. ಆದರೆ, ಫುಟ್ಬಾಲ್ ಕ್ರೀಡೆ ಪುರುಷರಿಗೆ ಮಾತ್ರ ಮೀಸಲಾಗಿದೆ.
ಭಾಗವಹಿಸುವ ಕ್ರೀಡಾಪಟುಗಳು ಕರ್ನಾಟಕದ ನಿವಾಸಿಗಳಾಗಿರಬೇಕು. ರಕ್ಷಣಾ ಪಡೆ ಹಾಗೂ ಅರೆ ರಕ್ಷಣಾ ಪಡೆಯ ಆಟಗಾರರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಒಬ್ಬ ಆಟಗಾರ ಅಥವಾ ತಂಡ ಒಂದು ಬಾರಿ ತಾಲ್ಲೂಕು/ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದರೆ, ಮತ್ತೊಂದು ತಾಲ್ಲೂಕು ಅಥವಾ ಜಿಲ್ಲೆಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ.
ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಿಗರು ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹರಾಗಲಿದ್ದಾರೆ. ತೀರ್ಪುಗಾರರ ತೀರ್ಮಾನ ಅಂತಿಮವಾಗಿರುತ್ತದೆ ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗೆ ಶ್ರೀ ಸಂತೋಷ ರಾಠೋಡ, ತಾಲ್ಲೂಕು ಕ್ರೀಡಾಂಗಣ ವ್ಯವಸ್ಥಾಪಕರು (ದೂರವಾಣಿ: 9008765003) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಲಬುರಗಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Comments are closed.

Don`t copy text!