ಆಳಂದ ಪಟ್ಟಣದಲ್ಲಿ ಸೆ. 17ರಂದು ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರದ ಶಾಸಕ ಬಿ ವೈ ವಿಜೇಯೇಂದ್ರ ಅವರನ್ನು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾ ಎಸ್ ಗುತ್ತೇದಾರ ಅವರು ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು.
ಆಳಂದ ಪಟ್ಟಣದಲ್ಲಿ ಸೆ. 17ರಂದು ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರದ ಶಾಸಕ ಬಿ ವೈ ವಿಜೇಯೇಂದ್ರ ಆಗಮಿಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾ ಎಸ್ ಗುತ್ತೇದಾರ ಅವರು, ಸೆ. 17ರಂದು ಆಳಂದ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಭಾರತೀಯ ಜನತಾ ಪಕ್ಷದ ಕಚೇರಿಯನ್ನು ಅಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜೇಯೇಂದ್ರ ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ ಆಳಂದ ಮಾಜಿ ಶಾಸಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿ. ಅಣ್ಣಾರಾವ ವೀರಭದ್ರಪ್ಪ ಪಾಟೀಲ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಸಾಯಂಕಾಲ ಆಳಂದ ಪಟ್ಟಣದ ಶ್ರೀರಾಮ ಮಾರುಕಟ್ಟೆ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ದಶಮಾನೋತ್ಸವ ಹಾಗೂ ಬೃಹತ ಹಿಂದೂ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಲಿದ್ದಾರೆ. ಬೃಹತ ಹಿಂದೂ ಸಮಾವೇಶದಲ್ಲಿ ಗದಗನ ಜಗದ್ಗುರು ಸದಾಶಿವ ಮಹಾಸ್ವಾಮಿಗಳು ಆಶೀವರ್ಚನ ನೀಡಲಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ತಾಲೂಕಿನ ನಿಯೋಗದ ಜೊತೆ ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿ ಅವರನ್ನು ಆಹ್ವಾನಿಸಿದರು. ನಿಯೋಗದಲ್ಲಿ ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಮುಖಂಡ ಮಹೇಶ ಗೌಳಿ, ಶಿವಪ್ರಕಾಶ ಹೀರಾ ಇದ್ದರು.
Comments are closed.