ಒಂದು ತಿಂಗಳಿಂದ ಆಳಂದ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ರೈತರ ಹೊಲಗಳು, ಬೆಳೆಗಳು, ರಸ್ತೆ ಮತ್ತು ಮನೆಗಳು ತೀವ್ರ ಹಾನಿಗೊಳಗಾಗಿವೆ ಇದಕ್ಕೆ ಸಾಲಮನ್ನಾ ಮತ್ತು ಪರಿಹಾರವೇ ದಾರಿಯಾಗಿದೆ ಎಂದು ಭಾವಿಸಿ ತಾಲೂಕಿನ ಅನೇಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಾಳೆ ಬೆಳಿಗ್ಗೆ 11 ಗಂಟೆಗೆ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರು ಆಳಂದ ಮಂಡಲ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಹಾಗೂ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ಮನವಿ ಮಾಡಿದ್ದಾರೆ.