ಆಳಂದ ಪಟ್ಟಣದ ಪ್ರತಿಷ್ಠಿತ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢ ಶಾಲೆಯ ಪ್ರಥಮ ಬ್ಯಾಚ್‍ನ ವಿದ್ಯಾರ್ಥಿಗಳಿಂದ ಶಾಲೆಯ ರಜತ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಡಿ. 21ರಂದು ಬಸ್ ನಿಲ್ದಾಣದ ಸಮೀಪವಿರುವ ಎಸ್‍ಆರ್‍ಜಿ ಕಾಂಪ್ಲೆಕ್ಸ್ ಹಿಂದುಗಡೆಯ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಶಾಲೆಯಲ್ಲಿ ಓದಿ ದೇಶ ವಿದೇಶದಲ್ಲಿ ನೆಲೆಸಿರುವ ವಿದ್ಯಾರ್ಥಿಗಳೆಲ್ಲರೂ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಸುಭಾಷ್ ಆರ್ ಗುತ್ತೇದಾರ, ಕಾರ್ಯದರ್ಶಿ ಹರ್ಷಾ ಗುತ್ತೇದಾರ, ಕ್ಷೇತ್ರ ಶಿಕ್ಷಣಾಧಿಕಾರಿ ವಿ ರಂಗಸ್ವಾಮಿ ಶೆಟ್ಟಿ, ಡಾ. ಅಪ್ಪಾಸಾಬ ಬಿರಾದಾರ, ಮಲ್ಲಿಕಾರ್ಜುನ ಬುಕ್ಕೆ, ಮಲ್ಲಿನಾಥ ತುಕ್ಕಾಣೆ ಭಾಗವಹಿಸಲಿದ್ದಾರೆ ಎಂದು ಹಳೆಯ ವಿದ್ಯಾರ್ಥಿ ಕಾರ್ಯಕ್ರಮ ಸಂಯೋಜಕ ಕಲಬುರಗಿಯ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಾರಾಮ ವಾಡೇದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.