Shubhashaya News

ಸಂಬಳ ಕಡಿತದ ಸುದ್ದಿ ಸತ್ಯಕ್ಕೆ ದೂರವಾದ ಮಾತು

ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತ ಮಾಡಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಸರ್ಕಾರ ನೌಕರರ ವೇತನ ಕಡಿತದಂತಹ ತೀರ್ಮಾನ ತೆಗೆದುಕೊಳ್ಳುವ ಮುಂಚೆ ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಇನ್ನು ಸಂಬಳ ಕಡಿತದ ಬಗ್ಗೆ ಯಾವುದೇ ಚರ್ಚೆಗಳು ಸರ್ಕಾರ ಹಾಗೂ ನೌಕರರ ಸಂಘದ ಪದಾಧಿಕಾರಿಗಳ ಜೊತೆ ನಡೆದಿಲ್ಲ. ಹೀಗಾಗಿ ಸರ್ಕಾರಿ ನೌಕರರ ವೇತನ ಕಡಿತದ ವದಂತಿ ಸತ್ಯಕ್ಕೆ ದೂರವಾದದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸರ್ಕಾರಿ ನೌಕರರ ಒಂದು ತಿಂಗಳ ಸಂಬಳ ಕಡಿತ ಮಾಡುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸ್ಪಷ್ಟನೆ ನೀಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ ಎಂದು ಅವರು ತಿಳಿಸಿದ್ದಾರೆ.

Leave A Reply

Your email address will not be published.