Shubhashaya News

ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ : ರಿಸಲ್ಟ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಇಂದು ಹೊರಬೀಳಲಿದೆ. ಮಧ್ಯಾಹ್ನ 3.00 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. https://karresults.nic.in ಲಿಂಕ್​ ಮೂಲಕ ಹಾಗೂ KarnatakaOne Mobile App ಮೂಲಕವೂ ರಿಸಲ್ಟ್​ ನೋಡಬಹುದು.

ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್​ಆ್ಯಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವರ್ಷ ಮೊದಲ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕ ಪಟ್ಟಿಯು (Marks Card) ಡಿಜಿಲಾಕರ್ (DigiLocker) ಮೂಲಕ ಇಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯವಿರಲಿದೆ. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಅಂಕಪಟ್ಟಿಯನ್ನು ಡಿಜಿಲಾಕರ್​​ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಬಯಸುವವರು ವಿಡಿಯೋ ಲಿಂಕ್​ https://tinyurl.com/mw84wmh9 ಮೂಲಕ ಪ್ರಕ್ರಿಯೆಯನ್ನು ತಿಳಿದುಕೊಳ್ಳಬಹುದು. ಫಲಿತಾಂಶ ಪಟ್ಟಿಯು ಸಂಬಂಧಿತ ಕಾಲೇಜುಗಳಿಗೆ 09-04-2026ರ ಮಧ್ಯಾಹ್ನ 3.00 ಗಂಟೆಗೆ ಸಿಗಲಿದೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

Comments are closed.

Don`t copy text!