Shubhashaya News

ವಿಕೆಜಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

ಆಳಂದ ಪಟ್ಟಣದ ಪ್ರತಿಷ್ಠಿತ ಎಸ್‍ಆರ್‍ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಯಾದ VKG Arts, Science and Commerce Degree College ನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.

ಕಾಲೇಜಿನ ಮಾಹಿತಿಯ ಪ್ರಕಾರ, ಕಲಾ (Arts), ವಿಜ್ಞಾನ (Science ) ಮತ್ತು ವಾಣಿಜ್ಯ (Commerce ) ವಿಭಾಗಗಳಲ್ಲಿ ವಿವಿಧ ಪದವಿ ಕೋರ್ಸ್‍ಗಳಿಗೆ ಪ್ರವೇಶ ನೀಡಲಾಗುತ್ತಿದೆ. ಪಿಯುಸಿ ಅಥವಾ 12ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಪದವಿ ಹಂತದಲ್ಲೇ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೂಡ ನೀಡಲಾಗುತ್ತಿದೆ.

ಪ್ರವೇಶಕ್ಕಾಗಿ ಅಗತ್ಯ ದಾಖಲೆಗಳಾಗಿ 10ನೇ ಮತ್ತು 12ನೇ ತರಗತಿ ಅಂಕಪಟ್ಟಿ, ಟ್ರಾನ್ಸ್ಫರ್ ಸರ್ಟಿಫಿಕೇಟ್ (ಖಿಅ), ಆಧಾರ್ ಕಾರ್ಡ್ ಪ್ರತಿಗಳು ಹಾಗೂ ಇತ್ತೀಚಿನ ಫೆÇೀಟೋಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಸೀಟುಗಳ ಸಂಖ್ಯೆ ಸೀಮಿತವಾಗಿರುವುದರಿಂದ ವಿದ್ಯಾರ್ಥಿಗಳು ತ್ವರಿತವಾಗಿ ಅರ್ಜಿ ಸಲ್ಲಿಸುವಂತೆ ಕಾಲೇಜು ಪ್ರಾಚಾರ್ಯ ಕಲ್ಯಾಣಿ ಎಸ್ ಸಾವಳಗಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಕಾಲೇಜಿನ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಮೊ. ನಂ. 9740477617 ಗೆ ಕರೆ ಮಾಡಬಹುದು.

Comments are closed.

Don`t copy text!