ಆಳಂದ: ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಆಳಂದ: ಡಾ. ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಿಕ್ಕು ತೋರಿಸುತ್ತಿವೆ. ಶಿಕ್ಷಣದ ಮೂಲಕವೇ ವ್ಯಕ್ತಿ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಸಂಪನ್ಮೂಲ ವ್ಯಕ್ತಿ ರಾಜೇಂದ್ರ ಕಡಗನ್ ಅವರು ಹೇಳಿದರು.
ಪಟ್ಟಣದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿ ಆಚರಣೆ ಹಾಗೂ ನಿಲಯದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸಕರಾಗಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶ್ರಮಪಟ್ಟು ವಿದ್ಯಾಭ್ಯಾಸದಲ್ಲಿ ಮುಂದುವರಿಯಬೇಕು ಹಾಗೂ ತಮ್ಮ ಸಾಧನೆಗಳ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.
ಈ ಕಾರ್ಯಕ್ರಮದಲ್ಲಿ ನಿಲಯ ಮೇಲ್ವಿಚಾರಕರಾದ ಸಿದ್ಧರಾಮ ಸಾಲೇಗಾಂವ ಮತ್ತು ನಿಲಯ ಪಾಲಕರಾದ ಗುಂಡೇರಾಯ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಅಂಕುಶ ರಾಜೇಂದ್ರ, ಅರುಣ ಮಹಾದೇವ ಹಾಗೂ ಲವ ರಾಜೇಂದ್ರ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ನಿವೃತ್ತ ಸೈನಿಕ ಸಂಘದ ಅಧ್ಯಕ್ಷ ಸಿದ್ಧಲಿಂಗ ಮಲಶೆಟ್ಟಿ ನಿರೂಪಿಸಿದರು. ನಿಲಯಪಾಲಕರಾದ ನಿಂಗಣ್ಣ ದೊಡ್ಡಮನಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಮತಾಲೋಕ ಶಿಕ್ಷಣ ಸಮಿತಿ ಹಾಗೂ ನಿವೃತ್ತ ಸೈನಿಕ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಸೈನಿಕ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ಥಿಗಳು, ವಸತಿನಿಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Comments are closed.