ಕರ್ನಾಟಕ ಚುನಾವಣೆಯಲ್ಲಿ ಈಗಾಗಲೇ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ವಿರುದ್ಧ ಬರೋಬ್ಬರಿ 22 ಸಾವಿರಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇದೀಗ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಕೂಡ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಮರ್ಥ ಶಾಮನೂರು ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಹೌದು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ ಶಾಮನೂರು ಅವರು ಭರ್ಜರಿ ಗೆಲುವು ಕಂಡಿದ್ದಾರೆ. 6430 ಮತಗಳಿಂದ ಸಮರ್ಥ ಶಾಮನವರು ಅವರು ಗೆಲುವು ಸಾಧಿಸಿದ್ದಾರೆ.ಇನ್ನು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಅವರು ಸೋತಿದ್ದಾರೆ.ಇನ್ನು ಮೂರು EVM ಮಷೀನ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಮತ ಎಣಿಕೆಯಲ್ಲಿ ವಿಳಂಬವಾಗುತ್ತಿದ್ದು ಈಗಾಗಲೇ ಸಮರ್ಥ ಶಾಮನೂರು ಬೆಂಬಲಿಗರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ
Comments are closed.