ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 3,479 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಮೇ. 31 ರ 2021 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ದೇಶಾದ್ಯಂತ ಇರುವ ಏಕಲವ್ಯ ಮಾದರಿ ವಸತಿ ಶಾಲೆಗಳ ವಿವಿಧ ಹುದ್ದೆಗಳಾದ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಪ್ರೋಸ್ಟ್ ಗ್ರಾಜುಯೇಟ್ ಟೀಚರ್, ಟ್ರೈನ್ಡ್ ಗ್ರಾಜುಯೇಟ್ ಟೀಚರ್ ಭರ್ತಿಗೆ ಬುಡಕಟ್ಟು ಸಂಬಂಧಿ ಸಚಿವಾಲಯ ನೇಮಕಾತಿ ಅಧಿಸೂಚನೆ ಹೊರಡಿಸಿದೆ.
ಹುದ್ದೆಗಳ ವಿವರ
ಪ್ರಾಂಶುಪಾರು -175
ಉಪಪ್ರಾಂಶುಪಾಲರು: 116
ಪಿಜಿಟಿ ಹುದ್ದೆಗಳು : 1244
ಟಿಜಿಟಿ ಹುದ್ದೆಗಳು: 1944
ಒಟ್ಟು ಹುದ್ದೆಗಳ ಸಂಖ್ಯೆ : 3479
ಶೈಕ್ಷಣಿಕ ಅರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ ಬಿ,ಇಡಿ/ಎಂ.ಇಡಿ ಉತ್ತೀರ್ಣರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು https://tribal.nic.in ವೆಬ್ ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.
ಕೃಪೆ: ಕನ್ನಡ ನ್ಯೂಜ್.ಕಾಮ್