Shubhashaya News

ಗುಡ್ ನ್ಯೂಸ್ : ಅನುದಾನಿತ ಶಾಲಾ ಶಿಕ್ಷಕರಿಗೆ ವಿಮೆ ಸೌಲಭ್ಯ

ರಾಜ್ಯ ಸರ್ಕಾರವು ಖಾಸಗಿ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕೊರೊನಾ ನಿಯಂತ್ರಣ ಕರ್ತವ್ಯದಲ್ಲಿ ಪಾಲ್ಗೊಂಡು ಕೊರೊನಾ ಸೋಂಕಿನಿಂದ ಮೃತಪಟ್ಟ ಅನುದಾನಿತ ಶಾಲಾ ಶಿಕ್ಷಕರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ ನೀಡುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಲಾಗಿದೆ.

ಇಲಾಖೆಯ ಮುಖ್ಯಸ್ಥರು, ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಆಯುಕ್ತರು ಅನುದಾನಿತ ಶಾಲಾ ಶಿಕ್ಷಕರನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಿದ ಆದೇಶದ ಪ್ರತಿ ಇದ್ದರೆ ವಿಮೆ ಸೌಲಭ್ಯಕ್ಕೆ ಪರಿಗಣಿಸುವಂತೆ ಆರ್ಥಿಕ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.

ಕೋವಿಡ್ ಕರ್ತವ್ಯದಲ್ಲಿ ಸರ್ಕಾರಿ ನೌಕರರು, ಅಂಗನವಾಡಿ ಕಾರ್ಯಕರ್ತರು ಮೃತಪಟ್ಟರೆ ಅವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ ವಿತರಿಸಲು 2020 ರ ಆಗಸ್ಟ್ ನಲ್ಲಿ ಆದೇಶ ಹೊರಡಿಸಿಸಲಾಗಿತ್ತು. ಇದೀಗ ಅನುದಾನಿತ ಶಾಲೆ ಶಿಕ್ಷಕರಿಗೂ ಈ ಸೌಲಭ್ಯವನ್ನು ವಿಸ್ತರಿಸಲಾಗಿದೆ.

Leave A Reply

Your email address will not be published.