ಆಳಂದ: ಕ್ಷೇತ್ರದ ಸಮಸ್ಯೆ ಹಾಗೂ ಪರಿಹಾರ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ ಅವರನ್ನು ಭೇಟಿ ಮಾಡಿದ ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷತೆ ಮಹೇಶ್ವರಿ ಎಸ್. ವಾಲಿ ಅವರು ಸಚಿವರ ಗಮನಕ್ಕೆ ತಂದರು.
ಆಳಂದ: ತಾಲೂಕಿನ ವಿವಿಧ ಜನಪರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟವನ್ನು ಇನ್ನಷ್ಟು ಸಂಘಟಿತವಾಗಿ ಹಾಗೂ ತೀವ್ರವಾಗಿ ಮುಂದುವರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಲಬುರಗಿ ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಅವರಿಗೆ ಸಲಹೆ ನೀಡಿದರು.
ಗುರುವಾರ ಬೆಂಗಳೂರಿನ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಮಹೇಶ್ವರಿ ವಾಲಿ, ಆಳಂದ ತಾಲೂಕಿನ ಜನತೆ ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು. ತಾಲೂಕಿನ ಕುಡಿಯುವ ನೀರು, ಮೂಲಸೌಕರ್ಯ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ಸಾರ್ವಜನಿಕರಿಗೆ ಸಂಬAಧಿಸಿದ ಹಲವು ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದರು.
ಈ ಸಂದರ್ಭದಲ್ಲಿ ತಾಲೂಕಿನ ಜನರ ಹಿತಾಸಕ್ತಿಗಾಗಿ ಕೈಗೊಳ್ಳಲಾಗುತ್ತಿರುವ ಹೋರಾಟಗಳ ವಿವರವನ್ನು ಮಹೇಶ್ವರಿ ವಾಲಿ ವಿವರಿಸಿದರು. ಭ್ರಷ್ಟಾಚಾರ ನಿರ್ಮೂಲನೆ, ಸಾರಾಯಿ ಮುಕ್ತ ಸಮಾಜ ನಿರ್ಮಾಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರಿಗೆ ಅಗತ್ಯವಾದ ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಒತ್ತಾಯಿಸಿ ಮುಂಬರುವ ದಿನಗಳಲ್ಲಿ ಹಂತ ಹಂತವಾಗಿ ಜನಾಂದೋಲನ ರೂಪಿಸುವ ಕುರಿತು ಮಾಹಿತಿ ನೀಡಿದರು.
ಮಹಿಳೆಯರ ಗೌರವ ಮತ್ತು ಸುರಕ್ಷತೆಗೆ ಗ್ರಾಮೀಣ ಭಾಗಗಳಲ್ಲಿ ಶೌಚಾಲಯಗಳ ಕೊರತೆ ಗಂಭೀರ ಸಮಸ್ಯೆಯಾಗಿದ್ದು, ಈ ಕುರಿತು ಜನಜಾಗೃತಿ ಮೂಡಿಸಿ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಮಹೇಶ್ವರಿ ವಾಲಿ ತಿಳಿಸಿದರು.
ಆಳಂದ ತಾಲೂಕಿನ ಅಭಿವೃದ್ಧಿಗೆ ಸಂಬAಧಿಸಿದ ಹಲವು ವಿಷಯಗಳನ್ನು ಕೇಂದ್ರ ಸಚಿವರ ಗಮನಕ್ಕೆ ತಂದಿರುವುದಾಗಿ ಅವರು ತಿಳಿಸಿದ್ದು, ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಪಕ್ಷದ ವತಿಯಿಂದ ನಿರಂತರ ಹೋರಾಟ ಮುಂದುವರಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಈ ವೇಳೆ ಎಚ್.ಡಿ. ಕುಮಾರಸ್ವಾಮಿ ಅವರು ಜನಪರ ಹೋರಾಟಗಳು ಶಾಂತಿಯುತ ಹಾಗೂ ಪರಿಣಾಮಕಾರಿಯಾಗಿ ನಡೆಯಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ ನೀಡಿ ನಿರಂತರವಾಗಿ ಧ್ವನಿಯಾಗಬೇಕು ಎಂದು ಮಹೇಶ್ವರಿ ವಾಲಿಗೆ ಮಾರ್ಗದರ್ಶನ ನೀಡಿದರು. ತಾಲೂಕಿನ ಅಭಿವೃದ್ಧಿ ಮತ್ತು ಜನರ ಹಿತಾಸಕ್ತಿಗೆ ಸಂಬAಧಿಸಿದ ವಿಷಯಗಳನ್ನು ಸೂಕ್ತ ಮಟ್ಟದಲ್ಲಿ ಪರಿಗಣಿಸುವ ಭರವಸೆಯನ್ನೂ ನೀಡಿದರು.