Shubhashaya News

ಅಸಂಘಟಿತ ಕಾರ್ಮಿಕರಿಗೆ ಉಚಿತ ಸ್ಮಾರ್ಟ್ ಕಾರ್ಡ್ ನೋಂದಣಿ

ಆಳಂದ: ಕಡಗಂಚಿಯಲ್ಲಿ ನಡೆದ ಅಸಂಘಟಿತ ಕಾರ್ಮಿಕರ ನೋಂದಣಿ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣಾ ಶಿಬಿರವನ್ನು ದುಡಿಮೆಗಾರರ ಆಯೋಗದ ಕಾರ್ಯದರ್ಶಿ ಸಿಸ್ಟರ್ ಸಿಂತಿಯ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಆಳಂದ: ಅಸಂಘಟಿತ ವಲಯದ ಕಾರ್ಮಿಕರು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಪಡೆಯುವ ಉದ್ದೇಶದಿಂದ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ದುಡಿಮೆಗಾರರ ಆಯೋಗ ಹಾಗೂ ಗುಲ್ಬರ್ಗ ಧರ್ಮಕ್ಷೇತ್ರದ ಸಹಯೋಗದಲ್ಲಿ ತಾಲೂಕಿನ ಕಡಗಂಚಿಯಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿ ಹಾಗೂ ಉಚಿತ ಸ್ಮಾರ್ಟ್ ಕಾರ್ಡ್ ವಿತರಣಾ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ದುಡಿಮೆಗಾರರ ಆಯೋಗದ ಕಾರ್ಯದರ್ಶಿ ಸಿಸ್ಟರ್ ಸಿಂತಿಯ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ, ಅಸಂಘಟಿತ ವಲಯದ ಕಾರ್ಮಿಕರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗದAತೆ ಪ್ರತಿಯೊಬ್ಬರೂ ಕಾರ್ಮಿಕರಾಗಿ ನೋಂದಾಯಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕು. ಮಾಲಾಶ್ರೀ ಮಾತನಾಡಿ, ಕಾರ್ಮಿಕರ ಸ್ಮಾರ್ಟ್ ಕಾರ್ಡ್ನ ಮಹತ್ವ, ನೋಂದಣಿಗೆ ಅಗತ್ಯವಿರುವ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಕಾರ್ಡ್ ಹೊಂದಿರುವವರಿಗೆ ದೊರೆಯುವ ವಿವಿಧ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಗಳ ಕುರಿತು ವಿವರವಾದ ಮಾಹಿತಿ ನೀಡಿದರು. ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ನ ನಿರ್ದೇಶಕ ಫಾ. ವಿಲಿಯಂ ಮಿರಾಂದ, ದುಡಿಮೆಗಾರರ ಆಯೋಗದ ಸಿಬ್ಬಂದಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು ೩೫ ಅಸಂಘಟಿತ ಕಾರ್ಮಿಕರು ಭಾಗವಹಿಸಿ ಪ್ರಯೋಜನ ಪಡೆದರು. ಅಗತ್ಯ ದಾಖಲೆಗಳನ್ನು ಸಮರ್ಪಕವಾಗಿ ಸಲ್ಲಿಸಿದ ಅರ್ಹ ಕಾರ್ಮಿಕರಿಗೆ ಸ್ಥಳದಲ್ಲೇ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಡ್ ಮಾಡಿಕೊಡಲಾಯಿತು.

Leave A Reply

Your email address will not be published.