Shubhashaya News

ಬರ ಘೋಷಣೆ, ರೈತರ ಸಾಲಮನ್ನಾ ಬೆಳೆ ವಿಮೆ ವಿತರಣೆಗೆ ಕೃಷಿಕ ಸಮಾಜ ಸಭೆಯಲ್ಲಿ ಸರ್ಕಾರಕ್ಕೆ ಒತ್ತಾಯ

ಆಳಂದ: ಪಟ್ಟಣದ ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ ಅಧ್ಯಕ್ಷತೆಯ ನಡೆದ ಸಭೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ತಿಪ್ಪಿಸ್ವಾಮಿ ಮಾಹಿತಿ ಒದಗಿಸಿದರು. ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪೂರ, ರಾಜಶೇಖರ ಪಾಟೀಲ ಚಿತಲಿ ಇತರರು ಇದ್ದರು.

ಆಳಂದ: ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಶನಿವಾರ ಕರೆದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ ಕೊರಳ್ಳಿ ಅವರ ಅಧ್ಯಕ್ಷತೆಯಲ್ಲಿ ಕರೆದ ಸಭೆಯಲ್ಲಿ ಹಾಗೂ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪೂರ ಅವರ ಮಾರ್ಗದರ್ಶನದಲ್ಲಿ ರಾಜ್ಯ ಸರ್ಕಾರಕ್ಕೆ ರೈತಪರ ಬೇಡಿಕೆ ಬರಗೋಷಣೆ, ರೈತ ಸಾಲಮನ್ನಾ ಹಾಗೂ ಕಳೆದ ಸಾಲಿನ ೨ನೇ ಕಂತಿನ ಬೆಳೆವಿಮೆ ಹಣವನ್ನು ತಕ್ಷಣೆ ನೀಡಬೇಕು ಹಾಗೂ ಪಟ್ಟಣದಲ್ಲಿ ಕೃಷಿಕ ಭವನ ನಿರ್ಮಾಣಕ್ಕೆ ನಿವೇಶನ ಹಾಗೂ ಅನುದಾನ ನೀಡಬೇಕು ಎಂದು ಸಭೆ ಪ್ರಸ್ತಾವನೆ ಸಲ್ಲಿಸಲು ನಿರ್ಧಸಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ದರಾಮಪ್ಪ ಪಾಟೀಲ ದಂಗಾಪುರ ಮಾತನಾಡಿ, ಮಳೆಯ ಅಭಾವದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಬೆಳೆ ಬೆಳೆಯುವುದು ದುಸ್ತರವಾಗಿದೆ. ಕಳೆದ ಸಾಲಿನ ಬೆಳೆ ವಿಮೆ ಪರಿಹಾರವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು. ಪ್ರಸಕ್ತ ಪರಿಸ್ಥಿತಿಯನ್ನು ಪರಿಗಣಿಸಿ ಬರಗಾಲ ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಲು ಪ್ರಸ್ತಾವನೆ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.
ಕೃಷಿಕ ಸಮಾಜದ ಸಭೆಗಳು ಕಾಲಕಾಲಕ್ಕೆ ನಡೆಯಬೇಕು. ರೈತರ ಸಮಸ್ಯೆಗಳ ಕುರಿತು ಚರ್ಚೆ, ಚಿಂತನೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಮೂಲಕ ಪರಿಹಾರಕ್ಕೆ ಪ್ರಯತ್ನಿಸಬೇಕು. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ರೈತರಿಗೆ ಯೋಜನೆಗಳ ನೈಜ ಲಾಭ ದೊರೆಯುತ್ತದೆ ಎಂದು ಅವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ ಮಾತನಾಡಿ, ರೈತರ ಆರ್ಥಿಕ ಸ್ಥಿತಿ ಬಲಪಡಿಸಲು ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ಅರಣ್ಯ ಇಲಾಖೆ ಸೇರಿದಂತೆ ಎಲ್ಲ ಸಂಬAಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸರ್ಕಾರದ ಯೋಜನೆಗಳು, ತಾಂತ್ರಿಕ ಮಾಹಿತಿ ಮತ್ತು ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ರೈತರ ಮನೆಬಾಗಿಲಿಗೆ ತಲುಪಿಸಬೇಕು ಹೇಳಿದರು.
ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದ ತಾಲೂಕು ಕೃಷಿಕ ಸಮಾಜದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈತಪರ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕೃಷಿಕ ಸಮಾಜವೂ ಇಲಾಖೆಗಳೊಂದಿಗೆ ಕೈಜೋಡಿಸಿ ಬೆನ್ನೆಲುಬಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
ಸಭೆ ನಿರ್ವಹಿಸಿದ್ದ ಸಹಾಯಕ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ ಅವರು ಮುಂಗಾರು ಮಳೆ ಪರಿಸ್ಥಿತಿ, ಬಿತ್ತನೆ ಪ್ರಗತಿ ಹಾಗೂ ಮಳೆಯ ಕೊರತೆಯಿಂದ ಎದುರಾಗಿರುವ ಸವಾಲುಗಳ ಕುರಿತು ಮಾಹಿತಿ ನೀಡಿದರು. ರೈತರು ಬೆಳೆ ವಿಮೆ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದು, ತಾಂತ್ರಿಕ ಸಮಸ್ಯೆಗಳ ಬಗ್ಗೆ ರೈತರಿಗೆ ಸ್ಪಷ್ಟನೆ ನೀಡಿದರು.
ತೋಟಗಾರಿಕೆ ಸಹಾಯಕ ನಿರ್ದೇಶಕ ಸುರೇಂದ್ರನಾಥ ಪನ್ನಪಗೋಳ ಅವರು ತೋಟಗಾರಿಕೆ ಬೆಳೆಗಳಿಗೆ ಲಭ್ಯವಿರುವ ಸಹಾಯಧನ, ವಿವಿಧ ಯೋಜನೆಗಳು ಹಾಗೂ ರೈತರು ಪಡೆಯಬಹುದಾದ ಸೌಲಭ್ಯಗಳ ಕುರಿತು ವಿವರಿಸಿದರು.
ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಲ್ಲಪ್ಪ ಇಂಗಳೆ ಮಾತನಾಡಿ, ಮಳೆ ಕೊರತೆಯಿಂದ ಮೇವು ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಪಶುಪಾಲಕರಿಗೆ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ಕ್ರಮಗಳು, ಜಾನುವಾರುಗಳ ಆರೋಗ್ಯ ಸಂರಕ್ಷಣೆ ಹಾಗೂ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ರೇಷ್ಮೆ ಇಲಾಖೆಯ ಶಿವಪುತ್ರ ಅವರು ರೇಷ್ಮೆ ಬೆಳೆಗಾರರು ಅನುಸರಿಸಬೇಕಾದ ತಾಂತ್ರಿಕ ಕ್ರಮಗಳು, ಉತ್ಪಾದನೆ ಹೆಚ್ಚಿಸುವ ವಿಧಾನಗಳು ಹಾಗೂ ಇಲಾಖೆಯಿಂದ ದೊರೆಯುವ ಸಹಾಯಧನ ಮತ್ತು ಸೌಲಭ್ಯಗಳನ್ನು ವಿವರಿಸಿದರು.
ಸಭೆಯಲ್ಲಿ ರಾಜಶೇಖರ ಪಾಟೀಲ ಚಿತಲಿ, ಮಹಾದೇವ ಹತ್ತಿ, ವೀರಣ್ಣ ಹೊನ್ನಶೆಟ್ಟಿ, ರೈತ ಮುಖಂಡ ಮೋಹನಗೌಡ ಪಾಟೀಲ, ರಾಜಶೇಖರ ಲಮಶೆಟ್ಟಿ, ಚಂದ್ರಶೇಖರ ಪಾಟೀಲ ಕೊರಳ್ಳಿ, ಸಿದ್ರಾಮಪ್ಪ ಪಾಟೀಲ ಮಲ್ಲಿಕಾರ್ಜುನ ಧನಶ್ರೀ, ಕುಪೇಂದ್ರ ವಿ. ಪಾಟೀಲ, ಶರಬಸಪ್ಪ ಪಾಟೀಲ, ಸೇರಿದಂತೆ ಕೃಷಿಕ ಸಮಾಜದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.
————-೦—————–

Leave A Reply

Your email address will not be published.