ಅಫಜಲಪುರ: ನಾನಾ ಕ್ಷೇತ್ರಗಳ ಸಾಧಕರ ಕೋಟಾದಲ್ಲಿ ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡುವ ಸಂದರ್ಭದಲ್ಲಿ ಸಮಾಜ ಸೇವೆ ಸಲ್ಲಿಸಿರುವ ಕುರುಬ ಸಮುದಾಯದ ಹಿರಿಯ ಮುಖಂಡ ಜೆ.ಎಂ.ಕೊರಬು ಅವರನ್ನು ವಿಧಾನಪರಿಷತ್ ನಾಮನಿರ್ದೇಶನ ಸದಸ್ಯರನ್ನಾಗಿ ಮಾಡಬೇಕೆಂದು ಶಾಸಕ ಎಂ.ವೈ.ಪಾಟೀಲ್ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮನವಿ ಮಾಡಲಾಯಿತು.
ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆಯವರ 84ನೇ ಹುಟ್ಟು ಹಬ್ಬ ಅಂಗವಾಗಿ ದೆಹಲಿಯಲ್ಲಿ ಭೇಟಿಯಾಗಿ, ಜೆ.ಎಂ.ಕೊರಬು ಅವರು ಕಳೆದ ಬಾರಿ ವಿಧಾನ ಸಭೆ ಚುನಾವಣೆಯ ಸಂದರ್ಭದಲ್ಲಿ ಹಗಲು-ರಾತ್ರಿ ಎನ್ನದೇ ಸಾಕಷ್ಟು ಶ್ರಮವಹಿಸಿ ನನ್ನ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಜೆ.ಎಂ.ಕೊರಬು ಅವರನ್ನು ವಿಧಾನ ಪರಿಷತ್ ನಾಮನಿರ್ದೇಶನ ಸದಸ್ಯರನ್ನಾಗಿ ಮಾಡಬೇಕೆಂದು ಶಾಸಕ ಎಂ.ವೈ.ಪಾಟೀಲ್ ಅವರು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಜಮಾದಾರ, ಸಿದ್ದಾರ್ಥ್ ಬಸರಿಗಿಡ, ಶಿವಾನಂದ ಗಾಡಿ ಸಾಹುಕಾರ, ಉದಯಭಟ್ಟ್, ಸುರೇಶ್ ತಿಬಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.