ಚಿತ್ತಾಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಯುಕ್ತ ಕರ್ನಾಟಕ ಪತ್ರಿಕೆ ಕಲಬುರಗಿ ಸ್ಥಾನಿಕ ಸಂಪಾದಕ ದಿ.ಜಯತೀರ್ಥ ಕಾಗಲಕರ್ ಅವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಚಿತ್ತಾಪುರ: ಬರವಣಿಗೆಯ ಮೂಲಕ ಜನರ ಸಂಕಷ್ಟಕ್ಕೆ ಪರಿಹಾರ ನೀಡುವ ಮೂಲಕ ಜನರ ಧ್ವನಿಯಾಗಿದ್ದ ದಿ. ಜಯತೀಥ ಕಾಗಲಕರ್ ಯುವ ಪತ್ರಕರ್ತರಿಗೆ ಶಕ್ತಿಯಾಗಿದ್ದರು ಎಂದು ಹಿರಿಯ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರಕರ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ ಅಕಾಲಿಕ ನಿಧನ ನಿಮಿತ್ತ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಹಮ್ಮಿಕೊಂಡ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಗಲಕರ್ ನಿಧನದಿಂದ ಪತ್ರಿಕೆ ಕ್ಷೇತ್ರ ಬಡವಾಗಿದೆ ಎಂದರು.
ಸಂಘದ ತಾಲೂಕು ಉಪಾಧ್ಯಕ್ಷ ಪ್ರಶಾಂತ ಪಾಟೀಲ್ ಮಾತನಾಡಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ವೀರೇಂದ್ರ ಕೊಲ್ಲೂರ್, ಮಲ್ಲಿಕಾರ್ಜುನ ಮುಡಬೂಳಕರ್, ಸಂಜು ಬುಳಕರ್, ಅನಂತ ದೇಶಪಾಂಡೆ, ಜಗದೇವ ದಿಗ್ಗಾಂವಕರ್, ಸಂತೋಷ ಕಟ್ಟಿಮನಿ ಇದ್ದರು.
Next Post