ಬೆಳೆ ವಿಮೆ ಅನ್ಯಾಯ ಸರಿಪಡಿಸಿ ರೈತರಿಗೆ ನ್ಯಾಯ ಕೊಡಿ- ಸುಭಾಷ್ ಆರ್ ಗುತ್ತೇದಾರ
ಫೋಟೊ ಸುದ್ದಿ: ಆಳಂದ ಪಟ್ಟಣದಲ್ಲಿ ಜರುಗಿದ ಬೆಳೆ ವಿಮೆಗಾಗಿ ಪ್ರತಿಭಟನೆಯಲ್ಲಿ ತಹಸೀಲದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
೨೦೨೫-೨೬ನೇ ಸಾಲಿನ ಆಳಂದ ತಾಲೂಕಿನ ಹಲವು ಗ್ರಾಮಗಳ ರೈತರಿಗೆ ಬೆಳೆ ವಿಮೆ ಜಮೆಯಾಗದಿರುವ ಕುರಿತು ಸಮಗ್ರ ತನಿಖೆ ನಡೆಸಿ, ಅರ್ಹ ರೈತರಿಗೆ ತಕ್ಷಣ ವಿಮೆ ಮೊತ್ತ ಜಮೆ ಮಾಡುವಂತೆ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಆಗ್ರಹಿಸಿದರು.
ಸೋಮವಾರ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರು ಆಳಂಡ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಆಳಂದ ತಾಲೂಕಿನ ಸಾವಿರಾರು ರೈತರು ಬೆಳೆ ನಷ್ಟ ಅನುಭವಿಸಿದ್ದರೂ, ಹಲವು ಗ್ರಾಮಗಳ ರೈತರಿಗೆ ಇನ್ನೂ ಬೆಳೆ ವಿಮೆ ಪರಿಹಾರ ಜಮೆಯಾಗಿಲ್ಲ. ಕೆಲವು ಗ್ರಾಮಗಳನ್ನು ಸಂಪೂರ್ಣವಾಗಿ “ಶೂನ್ಯ (Zeಡಿo)” ಎಂದು ಪರಿಗಣಿಸಿರುವುದು ರೈತರಲ್ಲಿ ತೀವ್ರ ಅಸಮಾಧಾನ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ ಎಂದು ದೂರಿದರು.
ವಾಸ್ತವದಲ್ಲಿ ಆ ಗ್ರಾಮಗಳಲ್ಲಿ ಬೆಳೆ ಹಾನಿ ಸಂಭವಿಸಿದ್ದರೂ, ಅವೈಜ್ಞಾನಿಕವಾಗಿ ಬೆಳೆ ಸಮೀಕ್ಷೆ ನಡೆಸಿರುವುದು, ಬೆಳೆ ಕಟಾವು ಪ್ರಯೋಗ (ಅಡಿoಠಿ ಅuಣಣiಟಿg ಇxಠಿeಡಿimeಟಿಣ – ಅಅಇ) ನಡೆಸುವ ವೇಳೆ ಲೋಪದೋಷಗಳು ನಡೆದಿರುವುದು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರಿಗೆ ನ್ಯಾಯಯುತ ಪರಿಹಾರ ದೊರೆಯದೆ ಅನ್ಯಾಯವಾಗಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ ಎಂದು ಆರೋಪಿಸಿದರು.
ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾ ಎಸ್ ಗುತ್ತೇದಾರ ಮಾತನಾಡಿ, ವಿಮೆ ಕಂಪನಿಯ ಅಧಿಕಾರಿಗಳು ಮತ್ತು ಸಂಬAಧಿಸಿದ ಇಲಾಖೆಯ ಕೆಲವು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ, ಗೋಲಮಾಲ್ ಹಾಗೂ ಪಾರದರ್ಶಕತೆಯ ಅಭಾವದಿಂದ ಅರ್ಹ ರೈತರು ಬೆಳೆ ವಿಮೆಯಿಂದ ವಂಚಿತರಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಹಲವಾರು ಗ್ರಾಮಗಳಲ್ಲಿ ಸಿಸಿ ಕಟಿಂಗ್ (ಅಅಇ) ನಡೆಸುವ ಸಂದರ್ಭದಲ್ಲಿ ನೈಜ ಬೆಳೆ ಪರಿಸ್ಥಿತಿಯನ್ನು ಪರಿಗಣಿಸದೆ ಅವೈಜ್ಞಾನಿಕ ಅಂಕಿ-ಅAಶಗಳನ್ನು ದಾಖಲಿಸಲಾಗಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ ಎಂದು ಹೇಳಿದರು.
ಆಳಂದ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಾದ ಖಜೂರಿ, ಹಾಳ ತಡಕಲ, ಹಡಲಗಿ, ಧುತ್ತರಗಾಂವ, ಆಳಂಗಾ, ಹೆಬಳಿ, ಕೋರಹಳ್ಳಿ, ಹಳ್ಳಿ ಸಲಗರ, ಮುನ್ನಹಳ್ಳಿ, ಧಂಗಾಪೂರ, ನಿಂಬರ್ಗಾ ಸೇರಿದಂತೆ ಅನೇಕ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಬೆಳೆ ವಿಮೆ ಬಂದಿರುವುದಿಲ್ಲ ಎಂದು ಆಪಾದಿಸಿದರು.
ಬಿಜೆಪಿ ಹಿರಿಯ ಮುಖಂಡರಾದ ವೀರಣ್ಣಾ ಮಂಗಾಣೆ, ಚಂದ್ರಶೇಖರ ಹಿರೇಮಠ, ಅಣ್ಣಾರಾವ ಪಾಟೀಲ ಕವಲಗಾ, ಬಸವರಾಜ ಬಿರಾದಾರ, ಹಣಮಂತ ಕಾಬಡೆ, ಶರಣಗೌಡ ದೇವಂತಗಿ, ಶಿವಪುತ್ರ ನಡಗೇರಿ, ಕಲ್ಯಾಣರಾವ ಪಾಟೀಲ ಮಾತನಾಡಿ, ಸರ್ಕಾರ, ಜಿಲ್ಲಾಡಳಿತದ ವಿರುದ್ಧ ಹರಿಹಾಯ್ದರು.
೨೦೨೫-೨೬ನೇ ಸಾಲಿನಲ್ಲಿ ಬೆಳೆ ವಿಮೆ ಜಮೆಯಾಗದ ಆಳಂದ ತಾಲೂಕಿನ ಎಲ್ಲಾ ಗ್ರಾಮಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಶೂನ್ಯ ಎಂದು ಪರಿಗಣಿಸಿರುವ ಗ್ರಾಮಗಳ ಬೆಳೆ ಸಮೀಕ್ಷೆಯನ್ನು ಮರುಪರಿಶೀಲಿಸಿ ನೈಜ ವರದಿ ಪಡೆಯಬೇಕು. ಬೆಳೆ ಕಟಾವು ಪ್ರಯೋಗ (ಅಅಇ) ನಡೆಸುವ ಸಂದರ್ಭದಲ್ಲಿ ನಡೆದಿರುವ ಲೋಪದೋಷಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಬೆಳೆ ವಿಮೆ ಕಂಪನಿಯ ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಶೀಲಿಸಿ ಯಾವುದೇ ಗೋಲಮಾಲ್ ಕಂಡುಬAದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅರ್ಹ ರೈತರಿಗೆ ಬಾಕಿ ಇರುವ ಬೆಳೆ ವಿಮೆ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಿ ಅವರ ಖಾತೆಗೆ ಜಮೆ ಮಾಡಬೇಕು. ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಹಾಗೂ ಸಿಸಿ ಕಟಾವು ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರೈತರು ಕೃಷಿಯನ್ನೇ ನಂಬಿಕೊAಡು ಜೀವನ ಸಾಗಿಸುತ್ತಿದ್ದು, ಬೆಳೆ ನಷ್ಟದಿಂದ ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ದೊರೆಯಬೇಕಾದ ಬೆಳೆ ವಿಮೆ ಪರಿಹಾರವೂ ಸಿಗದಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಆದ್ದರಿಂದ ಈ ವಿಷಯವನ್ನು ಅತ್ಯಂತ ತುರ್ತು ಹಾಗೂ ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಸುಭಾಷ ಪಾಟೀಲ, ಆನಂದರಾವ ಪಾಟೀಲ, ಕಲ್ಯಾಣಿ ದಾನಾಗೋಳ, ಶಿವಪ್ಪ ವಾರಿಕ, ಮಹಾದೇವಪ್ಪ ವಾಡೆ, ಆದಿನಾಥ ಹೀರಾ, ಕುಮಾರ ಬಂಡೆ, ಸಂತೋಷ ಹಾದಿಮನಿ, ಶಂಕರಗೌಡ ಪಾಟೀಲ, ರುದ್ರಯ್ಯ ಹಿರೇಮಠ, ಅಮೃತ ಬಿಬ್ರಾಣಿ, ನಾಗರಾಜ ಶೇಗಜಿ, ನಾಗರಾಜ ದೇನಕ, ಬಸವರಾಜ ಹತ್ತರಕಿ, ವೈಜನಾಥ ಪಾಟೀಲ, ಸುವರ್ಣಾ ಪಾಟೀಲ, ಶಿವಪ್ಪ ಘಂಟೆ, ಚಂದ್ರಕಾಮಥ ಭೂಸನೂರ, ಧರೇಪ್ಪ ಜಕಾಪೂರೆ, ಫಯ್ಯಾಜ ಪಟೇಲ, ಸಿದ್ದು ಪಾಟೀಲ, ಮಲ್ಲಿಕಾರ್ಜುನ ಸಾವಳಗಿ, ಶಿವಲಿಂಗಪ್ಪ ದರ್ಗಾಶಿರೂರ, ಅಶೋಕ ಘಾಣೂರೆ, ಪ್ರಕಾಶ ಸಣಮನಿ, ಸಂಜಯ ಚಂಗಳೆ, ಶಿವರಾಜ ಅವರಳ್ಳಿ, ಸೀತಾರಾಮ ಜಮಾದಾರ ಸೇರಿದಂತೆ ಬಿಜೆಪಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿದ್ದರು.