ಆಳಂದ ಪಟ್ಟಣದ ಎಸ್‌ಆರ್‌ಜಿ ಫೌಂಡೇಶನನಲ್ಲಿ ಜರುಗಿದ ಸ್ವಾತಂತ್ರö್ಯ ದಿನಾಚಾರಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ, ಡಾ. ಅಶೋಕರೆಡ್ಡಿ, ಕಲ್ಯಾಣಿ ಸಾವಳಗಿ, ಡಾ. ಅಪ್ಪಾಸಾಬ್ ಬಿರಾದಾರ, ಜ್ಯೋತಿ ವಿಶಾಖ್ ಇದ್ದರು.
ಹಲವಾರು ಜನ ಸ್ವಾತಂತ್ರö್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಸಂಕೇತವೇ ಸ್ವಾತಂತ್ರö್ಯ ಎಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ಅಭಿಪ್ರಾಯಪಟ್ಟರು.
ಶನಿವಾರ ಆಳಂದ ಪಟ್ಟಣದ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಹಾಗೂ ಎಸ್‌ಆರ್‌ಜಿ ಫೌಂಡೇಶನ್‌ನ ಅಡಿಯಲ್ಲಿ ನಡೆಯುತ್ತಿರುವ ವಿವಿಧ ಶಾಲಾ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ೮೦ನೇ ಸ್ವಾತಂತ್ರö್ಯ ದಿನಾಚಾರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತದ ಸ್ವಾತಂತ್ರ‍್ಯಕ್ಕೆ ೧೮೫೭ ರಿಂದ ೧೯೪೭ ರವರೆಗೆ ಹಲವು ದಶಕಗಳ ಕಾಲ ನಮ್ಮ ಪೂರ್ವಜರು ಹೋರಾಡಿರುವುದನ್ನು ಈ ಸಂದರ್ಭದಲ್ಲಿ ನಾವು ನೆನಪಿಸಿಕೊಳ್ಳಲೇಬೇಕು. ಸ್ವಾತಂತ್ರ‍್ಯ ಎಂದರೆ ಪ್ರತಿಯೊಬ್ಬ ವ್ಯಕ್ತಿಗೆ ಈ ಭಾರತದಲ್ಲಿ ಎಲ್ಲ ರೀತಿಯ ಮೂಲಭೂತ ಹಕ್ಕು ಇದೆ. ಎಲ್ಲ ರೀತಿಯ ಸ್ವಾತಂತ್ರ‍್ಯ ಇದೆ. ಆದರೆ ಒಬ್ಬ ವ್ಯಕ್ತಿಯು ತನ್ನ ಸ್ವಾತಂತ್ರ‍್ಯ ಹಕ್ಕಿನಿಂದ ಮತ್ತೊಬ್ಬರ ಸ್ವಾತಂತ್ರ‍್ಯಕ್ಕೆ ಅಡ್ಡಿ ಆಗುವ ಯಾವುದೇ ಕೆಲಸವನ್ನು ಮಾಡಬಾರದು ಎಂಬುದನ್ನು ಸದಾ ನೆನಪಿನಲ್ಲಿ ಇಟ್ಟುಕೊಂಡಿರಬೇಕು. ಈ ಮಾತನ್ನು ಪೋಷಕರು, ಶಿಕ್ಷಕರು ಎಲ್ಲ ಮಕ್ಕಳಿಗೆ ಹೇಳಿಕೊಟ್ಟು, ಅರ್ಥ ಮಾಡಿಸಬೇಕು. ಹೆಚ್ಚಿನ ನೈತಿಕ ಶಿಕ್ಷಣವನ್ನು ನೀಡಲೇಬೇಕು ಎಂದು ಕರೆ ನೀಡಿದರು.
ಬ್ರಿಟಿಷರಿಂದ ಸ್ವಾತಂತ್ರ‍್ಯಗೊAಡ ನಂತರ ಭಾರತ ದೇಶವು ಹಲವು ಮೈಲಿಗಲ್ಲುಗಳನ್ನು ಕಂಡಿದೆ. ಆರ್ಥಿಕತೆ, ರಾಜಕೀಯ, ತಂತ್ರಜ್ಞಾನ, ವಿಜ್ಞಾನ, ಮೂಲಸೌಕರ್ಯಗಳು ಹೀಗೆ ಎಲ್ಲಾ ಕ್ಷೇತ್ರಗಳಲ್ಲು ಸಹ ಅನೇಕ ಸಾಧನೆಗಳಿಗೆ ಸಾಕ್ಷಿಯಾಗಿದೆ. ಈ ಸಾಧನೆ, ಅಭಿವೃದ್ಧಿಗಳ ಸಂಖ್ಯೆ ಸ್ವಾತಂತ್ರ‍್ಯ ಭಾರತದಲ್ಲಿ ಹೆಚ್ಚುತ್ತಲೇ ಇರುತ್ತದೆ ಹೊರತು, ಎಂದಿಗೂ ಇದಕ್ಕೆ ಅಂತ್ಯ ಎನ್ನುವುದಿಲ್ಲ. ಎಲ್ಲಿ ಪ್ರಜೆಗಳಿಗೆ ಸ್ವಾತಂತ್ರ‍್ಯ ಇರುತ್ತದೋ, ಯಾವ ದೇಶದ ಪ್ರಜೆಗಳಿಗೆ ಸ್ವಾತಂತ್ರ‍್ಯ ಇರುತ್ತದೋ, ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ‍್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ ನಿರಂತರವಾಗಿ ಸಾಗುತ್ತಿರುತ್ತದೆ. ಅದಕ್ಕೆ ಕೊನೆ ಎಂಬುದು ಇಲ್ಲ. ಅದಕ್ಕೆ ಇಂದಿನ ಭಾರತವೇ ಸಾಕ್ಷಿ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಸುಭಾಷ್ ಗುತ್ತೇದಾರ ಅವರು, ಸ್ವಾತಂತ್ರ‍್ಯ ಭಾರತದಲ್ಲಿ ಇಂದಿಗೂ ಸಹ ಹಲವು ಕಡೆಗಳಲ್ಲಿ ನಾವು ಅಸಮಾನತೆ, ದೌರ್ಜನ್ಯ, ಮಹಿಳೆಯರ ಮೇಲಿನ ಎಲ್ಲ ತರಹದ ಕಿರುಕುಳಗಳು, ಆಸಿಡ್ ದಾಳಿ, ಸರ್ಕಾರಗಳ ಮೇಲಿನ ಭ್ರಷ್ಟಾಚಾರಗಳು, ಜನರಿಂದ ಆಯ್ಕೆಯಾದ ನಾಯಕರುಗಳೇ ಎದುರಿಸುತ್ತಿರುವ ಅಪಾಧನೆಗಳು, ಅವರ ಅಪರಾಧಗಳು, ರಾಜಕೀಯ ಪಕ್ಷಗಳ ಒಬ್ಬರ ಮೇಲ್ಲೋಬ್ಬರ ಮಾತಿನ ಕೆಸರೆರಚಾಟಗಳು ಎಲ್ಲವನ್ನು ನೋಡಿದರೆ ನಮಗೆ ಸಹಿಲಾಗದ ದುಃಖವಾಗುತ್ತದೆ. ಇದಕ್ಕೆ ಕೊನೆ ಎಂದು, ದೇಶ ಶಾಂತಿಯಿAದ ಇರುವುದೆಂದು, ಐಕ್ಯತೆ ಸಾರುವುದು ಎಂದು ಎಂಬೆಲ್ಲ ಪ್ರಶ್ನೆಗಳು ನಮ್ಮನ್ನು ಕಾಡುತ್ತವೆ ಎಂದು ನುಡಿದರು.
ಇಂದಿನ ಪ್ರಜೆಗಳಾದ ನಾವು ಮುಂದೆ ದೊಡ್ಡವರಾದ ನಂತರ ನಾವೆಲ್ಲರೂ ಸಹ ಒಂದೊAದು ಕ್ಷೇತ್ರದಲ್ಲಿ ಏನಾದರೂ ಸಾಧಿಸುವ ಅವಕಾಶ ನಮಗಿದೆ. ಅಂದು ದೇಶಕ್ಕೆ ಸ್ವಾತಂತ್ರ ತಂದುಕೊಡಲು ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ತಿಲಕ್, ಶಾಸ್ತ್ರೀಜಿ ಹೀಗೆ ಅನೇಕರು ಹೋರಾಟ ಮಾಡಿದರು. ತಮ್ಮ ಜೀವನವನ್ನು ದೇಶದ ಜನರ ಸಂತೋಷಕ್ಕಾಗಿ ಮೀಸಲಿಟ್ಟರು. ಹಾಗೆಯೇ ಇಂದು ನಮ್ಮ ಸಮಾಜದಲ್ಲಿರುವ ಹಲವಾರು ಸಮಸ್ಯೆಗಳನ್ನು ಹೋಗಲಾಡಿಸಲು ನಾವು ಜ್ಞಾನವನ್ನು ಹೆಚ್ಚಿಸಿಕೊಂಡು ಕೆಲಸ ಮಾಡಬೇಕಿದೆ. ದೇಶ ಸೇವೆಗೆ ಮುಂದಾಗಬೇಕಿದೆ. ಅದು ಯಾವ ಕ್ಷೇತ್ರದಲ್ಲಾದರೂ ಸರಿಯೇ. ಉತ್ತಮ ಕೆಲಸ, ಜವಾಬ್ದಾರಿಗಳನ್ನು ನಿಭಾಯಿಸುವ ಶಕ್ತಿ ಬೆಳೆಸಿಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು.
ಎಸ್‌ಆರ್‌ಜಿ ಆಂಗ್ಲ್ ಮಾಧ್ಯಮ ಶಾಲೆ, ಎಂಎಆರ್‌ಜಿ ಪಿಯು ಕಾಲೇಜು, ವಿಕೆಜಿ ಪದವಿ ಕಾಲೇಜು, ಪಿಎಸ್‌ಆರ್‌ಎಂಎಸ್ ಬಿ.ಎಡ್ ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ವೇದಿಕೆಯ ಮೇಲೆ ಸಂಸ್ಥೆಯ ಆಡಳಿತಾಧಿಕಾರಿ ಹಣಮಂತ ಶೇರಿ, ಪ್ರಾಚಾರ್ಯರಾದ ಡಾ. ಅಶೋಕರೆಡ್ಡಿ, ಕಲ್ಯಾಣಿ ಸಾವಳಗಿ, ಡಾ. ಅಪ್ಪಾಸಾಬ್ ಬಿರಾದಾರ, ಜ್ಯೋತಿ ವಿಶಾಖ್
ಡಾ. ರಾಜಕುಮಾರ ಹರಳಯ್ಯ ಸ್ವಾಗತಿಸಿದರೆ, ಡಾ. ಸವಿತಾ ನಿರೂಪಿಸಿದರು. ಡಾ. ನಿರ್ಮಲಾ ವಂದಿಸಿದರು.