Shubhashaya News

ಬಡದಾಳದಲ್ಲಿ ಉಚಿತ ಕಣ್ಣಿನ ತಪಾಸಣೆ: 197 ಜನರಿಗೆ ಉಚಿತ ಕನ್ನಡಕ ವಿತರಣೆ

ಅಫಜಲಪುರ: ತಾಲೂಕಿನ ಗಡಿ ಗ್ರಾಮ ಬಡದಾಳ ಗ್ರಾಮದ ಶ್ರೀ ಚನ್ನಮಲ್ಲೇಶ್ವರ ಶ್ರೀಮಠದ ಆವರಣದಲ್ಲಿ ಸ್ಲಂ ಜನರ ಸಂಘಟನೆ–ಕರ್ನಾಟಕ, ಕಲಬುರಗಿ ಜಿಲ್ಲಾ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಹಾಗೂ ಶ್ರೀ ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆ, ಬಡದಾಳ ಇವರ ಸಂಯುಕ್ತ ಆಶ್ರಯದಲ್ಲಿ ಬಡ ಜನರಿಗಾಗಿ ಉಚಿತ ಕಣ್ಣಿನ ತಪಾಸಣೆ ಹಾಗೂ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು.ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ. ರವಿಕಾಂತ್ ಎಸ್. ಕ್ಯಾತ್ನಳ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮಕ್ಕೆ ಬಡದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರತ್ನಶೀಲ ಚಾಲನೆ ನೀಡಿದರು.
ನೇತ್ರ ಅಧಿಕಾರಿಗಳಾದ ಸುರೇಶ್ ಬಿ. ಹಾಗೂ ಅನಿಸ್ ಸುಲ್ತಾನ ಅವರು ಸಾರ್ವಜನಿಕರ ಕಣ್ಣಿನ ತಪಾಸಣೆ ನಡೆಸಿದರು. ಕಾರ್ಯಕ್ರಮದಲ್ಲಿ ಸುಮಾರು 197 ಜನರಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯ ಮುಖಂಡರು, ಸಂಘಟನೆಯ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಶ್ರೀಮಠದ ಭಕ್ತಾದಿಗಳು ಉಪಸ್ಥಿತರಿದ್ದರು.

Leave A Reply

Your email address will not be published.