ಯಲಬುರ್ಗಾ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜವನ್ನು ಶಾಸಕ ಹಾಲಪ್ಪ ಆಚಾರ್ ಸೋಮವಾರ ವಿತರಿಸಿದರು.
ಬಳಿಕ ಮಾತನಾಡಿ, ಕ್ಷೇತ್ರದಲ್ಲಿ ಕುಕನೂರು ಹಾಗೂ ಮಂಗಳೂರು,ಪಟ್ಟಣದ ಕೇಂದ್ರದಲ್ಲಿ ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಅನ್ನದಾತರು ಬಿತ್ತನೆ ಮಾಡುವ ಮೆಕ್ಕೆಜೋಳ,ತೊಗರಿ,ಸಜ್ಜೆ ಬೀಜಗಳನ್ನು ಹಂಚಿಕೆ ಮಾಡಲಾಗಿದೆ. ಇಲಾಖೆಯಿಂದ ರಿಯಾಯಿತಿ ದರದಲ್ಲಿ ದೊರೆಯುವ ಸವಲತ್ತುಗಳನ್ನು ಈ ಭಾಗದಲ್ಲಿ ಅನ್ನದಾತರು ಸರಿಯಾಗಿ ಪಡೆದುಕೊಳ್ಳಲು ಮುಂದಾಗಬೇಕು. ಸರಕಾರದಿಂದ ದೊರೆಯುವ ಯೋಜನೆಗಳನ್ನು ಸಕಾಲಕ್ಕೆ ಪಡೆಯಬೇಕು. ಯಾವುದೇ ರೈತರಿಗೆ ಅಡಚಣೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ತಮ್ಮ ಕಾರ್ಯವನ್ನು ನಿಭಾಯಿಸಬೇಕು ಎಂದು ತಿಳಿಸಿದರು.
ಕೃಷಿ ಸಹಾಯಕ ನಿರ್ದೇಶಕ ನಿಂಗಣ್ಣ ಬಿರದಾರ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ್,ಮುಖಂಡರಾದ ಬಸವಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ಕಳಕಪ್ಪ ತಳವಾರ, ಸುಧಕಾರ ದೇಸಾಯಿ,ಈರಪ್ಪ ಬಣಕಾರ್,ಮಲ್ಲಿಕಾರ್ಜುನ್ ನರೇಗಲ್ ಸೇರಿ ರೈತ ಮುಖಂಡರು ಪಾಲ್ಗೊಂಡಿದ್ದರು.