Shubhashaya News

ಕಮಲಾನಗರ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳದಿಂದ ೨ ಲಕ್ಷ ನೆರವು

ಆಳಂದ: ಕಮಲಾನಗರ ಶ್ರೀ ರೇವಣಾಸಿದ್ಧೇಶ್ವರ ದೇವಸ್ಥಾನ ಪದಾಧಿಕಾರಿಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಗಣಪತಿ ಮಾಳಂಜಿ ಅವರು ೨ಲಕ್ಷ ರೂಪಾಯಿ ಡಿಡಿ ವಿತರಿಸಿದರು.

ಆಳಂದ: ತಾಲೂಕಿನ ಕಮಲಾನಗರ ಗ್ರಾಮದ ಜಗದ್ಗುರು ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ೨ ಲಕ್ಷ ಮೊತ್ತದ ಡಿಡಿಯನ್ನು ಸಂಸ್ಥೆಯ ಜಿಲ್ಲಾ ನಿರ್ದೇಶಕ ಗಣಪತಿ ಮಾಳಂಜಿ ಅವರು ದೇವಸ್ಥಾನ ಟ್ರಸ್ಟ್ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣಪತಿ ಮಾಳಂಜಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಜನರ ಸಾಮಾಜಿಕ, ಆರ್ಥಿಕ ಹಾಗೂ ಸಮುದಾಯ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜಲಮಂಗಲ, ಜ್ಞಾನವಿಕಾಸ, ಹಿಂದೂ ರುದ್ರಭೂಮಿ ಅಭಿವೃದ್ಧಿ, ಸಿಎಸ್‌ಸಿ ಸೇವೆಗಳು ಹಾಗೂ ವಿವಿಧ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಸೌಲಭ್ಯಗಳನ್ನು ಗ್ರಾಮಸ್ಥರು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬ್ಯಾಂಕಿನ ಮುಂದುವರಿದ ಭಾಗವಾಗಿ ಕಾರ್ಯನಿರ್ವಹಿಸುತ್ತಿದ್ದು, ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಮಹಿಳೆಯರು ಹಾಗೂ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೂ ಒತ್ತು ನೀಡಲಾಗುತ್ತಿದೆ. ಕಮಲಾನಗರ ಗ್ರಾಮದ ಅಭಿವೃದ್ಧಿಗೆ ಸಂಸ್ಥೆ ಸದಾ ಗ್ರಾಮಸ್ಥರೊಂದಿಗೆ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು.
ಹಿರಿಯ ಮಲ್ಲಿನಾಥ ಪೊಲೀಸ್ ಪಾಟೀಲ್, ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಓಂಕೇಶ್ ಬಿ., ಕಲಬುರಗಿ ಪ್ರಾದೇಶಿಕ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ರಾಜೇಶ್ ಞ., ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ನಾಗಯ್ಯ ಹಿರೇಮಠ, ಸದಸ್ಯ ಪ್ರಭುಲಿಂಗಯ್ಯ ಸ್ವಾಮಿ, ಶರಣಬಸಪ್ಪ ಕುಂಬಾರ, ಶಂಭುಲಿAಗ ವಾಗ್ಧರ್ಗಿ, ರಾಜಕೀಯ ಮುಖಂಡ ಶ್ರೀಶೈಲ್ ಬಿರಾದಾರ್, ದಿಲೀಪ್ ಮೂಲಗೆ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಸಿದ್ದಪ್ಪ ಖಜುರಿ ಸೇರಿದಂತೆ ಊರಿನ ಹಿರಿಯರು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Leave A Reply

Your email address will not be published.