ಆಳಂದ: ತಾಲೂಕು ಕ್ರೀಡಾಕೂಟದದಲ್ಲಿ ಶ್ರೀಚಂದ ಸರ್ಕಾರಿ ಪ್ರೌಢಶಾಲೆಯ ಕಬ್ಬಡಿ ತಂಡವು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಸಂಭ್ರಮದಲ್ಲಿ ಶಾಸಕ ಬಿ.ಆರ್. ಪಾಟೀಲ ಅವರು ಟ್ರೋಫಿ ನೀಡಿ ಗೌರವಿಸಿದರು. ಶಿಕ್ಷಕ ಶ್ರೀಶೈಲ ದೇವರಾಯ, ಅರವಿಂದ ಭಾಸಗಿ ಇತರರು ಇದ್ದರು.
ಆಳಂದ: ತಾಲೂಕಿನ ಶ್ರೀಚಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಕಬ್ಬಡಿ ತಂಡವು ನಿನ್ನೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದ ಕಬ್ಬಡಿ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಸಂಭ್ರಮಿಸಿದರು.
ಪಟ್ಟಣದ ಸಾರ್ವಜನಿಕ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆ ೨೦೨೬-೨೭ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಬ್ಬಡ ತಂಡವು ಆಯ್ಕೆಯಾಗಿದೆ. ಆಯ್ಕೆಯಾದ ಈ ತಂಡದ ದೈಹಿಕ ಶಿಕ್ಷಣದ ಶಿಕ್ಷಕ ಶ್ರೀಶೈಲ ದೇವರಾಯ ಹಾಗೂ ಕ್ರೀಡಾಪಟುಗಳಿಗೆ ಶಾಸಕ ಬಿ.ಆರ್. ಪಾಟೀಲ ಅವರು ಟ್ರೋಫಿ ವಿತರಿಸಿ ಗೌರವಿಸಿದರು.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಸಕ ಬಿ.ಆರ್. ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಗೋವರ್ಧನ, ದೈಹಿಕ ಶಿಕ್ಷಣಾಧಿಕಾರಿ ಅರವಿಂದ ಭಾಸಗಿ, ಶ್ರೀಚಂದ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಅನಿಲಕುಮಾರ ಮೇತ್ರೆ, ಮುಖ್ಯಗುರು ಸುನಿತಾ ಸಂಗಪ್ಪ ಲೋಣಿ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀಶೈಲ ದೇವರಾಯ ಸೇರಿದಂತೆ ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ, ತಾಲೂಕು ಮಟ್ಟದಲ್ಲೂ ಉತ್ತಮ ಸಾಧನೆ ಮಾಡುವಂತೆ ಜಿಲ್ಲಾಮಟ್ಟದಿಂದ ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿಗಳು ಗೆಲುವು ಸಾಧಿಸಲಿ ಎಂದು ಸರ್ವರು ಶುಭ ಹಾರೈಸಿದ್ದಾರೆ.