ಕೋರೋನಾ ಎರಡನೇ ಅಲೆಯೂ ತಾಲೂಕಿನಲ್ಲಿ ವ್ಯಾಪಕವಾಗಿ ಪಸರಿಸಿರುವುದರಿಂದ ಈ ಬಾರಿಯೂ ತಾವು ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ ಆದ್ದರಿಂದ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಸಹಕರಿಸಬೇಕೆಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತಿಳಿಸಿದ್ದಾರೆ.
ಕೋರೋನಾ ನಿಯಂತ್ರಣಕ್ಕೆ ತರಲು ತಾಲೂಕಾ ಆಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದು ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಗೆ ಬೇಕಾದ ಮೂಲಭೂತ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಜನತೆ ಸಂಕಷ್ಟದಲ್ಲಿದ್ದಾರೆ ಅವರ ಸಹಾಯಕ್ಕೆ ನಿಲ್ಲುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಹೀಗಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾರ, ಶಾಲು ತರದೇ ತಾವಿದ್ದ ಸ್ಥಳದಲ್ಲಿಯೇ ಅಸಹಾಯಕರಿಗೆ, ಅಶಕ್ತರಿಗೆ ಅಗತ್ಯವಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡಿ ಶುಭ ಹಾರೈಸಬೇಕೆಂದು ಮನವಿ ಮಾಡಿದ್ದಾರೆ.