ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಡಾ|| ಬಿ.ಆರ್. ಅಂಬೇಡ್ಕರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪೂರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 21ನೇ ತಾರೀಖಿನಂದು ಜರುಗಲಿರುವ ಪ್ರವರ್ತನಾ ದಿನಕ್ಕೆ (ವಿಜಯದಶಮಿ ದಿನದಂದು) ದೀಕ್ಷಾ ಭೂಮಿಗೆ ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಿ ಕೆ.ಎಸ್.ಆರ್.ಟಿ.ಸಿ. ಬಸ್ಗಳ ಮೂಲಕ ಕಳುಹಿಸುವ ಸಂಬಂಧ ಅರ್ಹ ಡಾ. ಬಿ.ಆರ್. ಅಂಬೇಡ್ಕರವರ ಅನುಯಾಯಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಯಾತ್ರಾರ್ಥಿಗಳು ಎಸ್.ಸಿ./ಎಸ್.ಟಿ. ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ|| ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು. ಯಾತ್ರಾರ್ಥಿಗಳು ಕಡ್ಡಾಯವಾಗಿ ಬಿ.ಪಿ.ಎಲ್. ಕಾರ್ಡ್ ಹೊಂದಿರಬೇಕು. ಕನಿಷ್ಠ ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲು ಆದ್ಯತೆ ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಪಾಲ್ಗೊಳ್ಳಲು ಅವಕಾಶವಿದ್ದು, ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು 2ನೇ ಬಾರಿ ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. ರಾಜ್ಯದಲ್ಲಿ ಆಯಾ ಜಿಲ್ಲೆಗಳಿಂದಲೇ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಮಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುತ್ತದೆ. ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸಬೇಕು.
ಅರ್ಹ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ https://swd.karnatak.gov.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ 2026ರ ಅಕ್ಟೋಬರ್ 9 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಆನ್ಲೈನ್ ಅರ್ಜಿ ಪ್ರತಿ ಹಾಗೂ ಅವಶ್ಯಕ ದಾಖಲಾತಿಗಳನ್ನು ಲಗತ್ತಿಸಿ ಕಡ್ಡಾಯವಾಗಿ ಕಲಬುರಗಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ https://swd.karnatak.gov.in/ ವೆಬ್ಸೈಟ್ನ್ನು ಹಾಗೂ ಕಲಬುರಗಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಕೋರಲಾಗಿದೆ.