Shubhashaya News

ನಂದಿನಿ ಹಾಲು, ಮೊಸರಿನ ದರ ಏರಿಕೆ ಬೆನ್ನಲ್ಲೆ, ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಕೆಜಿಗೆ 100ರೂ.ಗಡಿ ದಾಟಿದ ಅಕ್ಕಿ ದರ! .

ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಯ ಬಿಸಿಯ ಬೆನ್ನಲ್ಲೇ ಇದೀಗ ಅಕ್ಕಿ ದರವೂ ದಿಡೀರ್ ಹೆಚ್ಚಾಗಿದ್ದು, ಸಾಮಾನ್ಯ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಮುಂಗಾರು ಮಳೆಯ ಕೊರತೆ ಹಾಗೂ ಸರಿಯಾದ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಭತ್ತದ ಇಳುವರಿ ಗಣನೀಯವಾಗಿ ಕುಸಿತ ಕಂಡಿದೆ. ಪ್ರಮುಖವಾಗಿ ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭತ್ತದ ನಾಟಿ ಪ್ರಮಾಣ ಕಡಿಮೆಯಾಗಿರುವುದು ಮಾರುಕಟ್ಟೆಯಲ್ಲಿ ಅಕ್ಕಿಯ ಅಭಾವಕ್ಕೆ ಕಾರಣವಾಗಿದೆ. ಇದರ ಪರಿಣಾಮವಾಗಿ ಕಳೆದ 2-3 ತಿಂಗಳುಗಳಲ್ಲಿ ಅಕ್ಕಿ ಬೆಲೆ ಶೇ. 25 ರಿಂದ 30 ರಷ್ಟು ಹೆಚ್ಚಾಗಿದ್ದು, ಪ್ರತಿ ಕೆಜಿ ಅಕ್ಕಿಯ ಬೆಲೆ ಬರೋಬ್ಬರಿ 100 ರೂಪಾಯಿಯ ಗಡಿ ದಾಟಿ ಸಾರ್ವಜನಿಕರಿಗೆ ಭಾರೀ ಕಷ್ಟ ತಂದೊಡ್ಡಿದೆ.
ಇನ್ನೊಂದೆಡೆ, ಮಾರುಕಟ್ಟೆಯಲ್ಲಿ ಸೃಷ್ಟಿಯಾಗಿರುವ ಈ ಕೊರತೆಯನ್ನೇ ಬಂಡವಾಳ ಮಾಡಿಕೊಂಡು ಹಲವು ಜಿಲ್ಲೆಗಳಲ್ಲಿ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು (ಸ್ಟಾಕ್) ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ವಿಚಾರವಾಗಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಸಚಿವ ರಿಜ್ವಾನ್ ಅರ್ಷದ್, “ಅಕ್ಕಿ ಕೊರತೆಯನ್ನು ಲಾಭ ಮಾಡಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ. ಖಾಸಗಿ ರೈಸ್ ಟ್ರೇಡರ್ಸ್ ಆಗಲಿ ಅಥವಾ ಯಾರೇ ಆಗಲಿ ಅಕ್ಕಿಯನ್ನು ಅಕ್ರಮವಾಗಿ ಹೋಲ್ಡ್ ಅಥವಾ ಸ್ಟಾಕ್ ಮಾಡಿ ಕೃತಕ ಅಭಾವ ಸೃಷ್ಟಿಸಿದರೆ ಖಂಡಿತವಾಗಿಯೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

Leave A Reply

Your email address will not be published.