ಕಲಬುರಗಿ: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಪುಸ್ತಕಗಳಿಗೆ ನವ ಕರ್ನಾಟಕ ಪುಸ್ತಕ ಮಳಿಗೆಯ ಕಲಬುರಗಿ ಶಾಖೆ ವತಿಯಿಂದ ವಿಶೇಷ ರಿಯಾಯಿತಿ ನೀಡಲಾಗುವುದು ವ್ಯವಸ್ಥಾಪಕ ಸಂಜಯ ಪಾಟೀಲ ತಿಳಿಸಿದ್ದಾರೆ.
ನವೆಂಬರ್ ತಿಂಗಳಾದ್ಯಂತ ಶೇ. 20ರಷ್ಟು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಓದುಗರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.