ರಾಜ್ಯದ ಪಡಿತರ ಚೀಟಿದಾರರಿಗೆ (ರೇಷನ್ ಕಾರ್ಡ್) ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ರೇಷನ್ ಕಾರ್ಡ್ದಾರರು ತಮ್ಮ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಲಾಖೆಯು ಕಾಲಾವಕಾಶವನ್ನು ವಿಸ್ತರಿಸಿದ್ದು, ಸಾರ್ವಜನಿಕರಿಗೆ ಮತ್ತಷ್ಟು ಅನುಕೂಲ ಮಾಡಿಕೊಟ್ಟಿದೆ.
ಈ ಮೊದಲು ಇ-ಕೆವೈಸಿ ಮಾಡಿಸಲು ನವೆಂಬರ್ 10 ಅಂತಿಮ ದಿನಾಂಕವಾಗಿತ್ತು. ಆದರೆ, ಇನ್ನೂ ಹಲವು ಪಡಿತರದಾರರು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದೇ ಇರುವುದನ್ನು ಗಮನಿಸಿದ ಇಲಾಖೆಯು, ಸಾರ್ವಜನಿಕರ ಹಿತದೃಷ್ಟಿಯಿಂದ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಆದೇಶಿಸಿದೆ. ಹೀಗಾಗಿ ಕೆವೈಸಿ ಮಾಡಿಸುವುದು ಬಾಕಿ ಇರುವವರು ಯಾವುದೇ ಗೊಂದಲವಿಲ್ಲದೆ ನಿಗದಿತ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ.
ಪಡಿತರದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ (ಪಡಿತರ ಅಂಗಡಿ) ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ಅಷ್ಟೇ ಅಲ್ಲದೆ, ಮೊಬೈಲ್ನಲ್ಲಿ ‘ಅನ್ಯಸೇವೆ’ ಆಪ್ (Annya Seva App) ಬಳಸಿಕೊಂಡು ಸ್ವತಃ ತಾವೇ ಇ-ಕೆವೈಸಿ ಪೂರ್ಣಗೊಳಿಸಲು ಕೂಡ ಅವಕಾಶ ನೀಡಲಾಗಿದೆ. ರೇಷನ್ ಕಾರ್ಡ್ ರದ್ದತಿಯಾಗುವುದನ್ನು ತಪ್ಪಿಸಲು ಮತ್ತು ಇಲಾಖೆಯ ಸೌಲಭ್ಯಗಳನ್ನು ತಡೆಯಿಲ್ಲದೆ ಪಡೆಯಲು ನವೆಂಬರ್ 30ರ ಒಳಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ ಇಲಾಖೆ ಮನವಿ ಮಾಡಿದೆ.