Shubhashaya News

ಉದ್ಯೋಗವಾರ್ತೆ: ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಿದೆ.

ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ BE/B.Tech ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು. (ಸೂಚನೆ: ಅಂಚೆ ಮತ್ತು ದೂರ ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.)

ಪ್ರಥಮ ದರ್ಜೆ ಲೆಕ್ಕ ಸಹಾಯಕರು:  ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿರಬೇಕು.

ಪಿಂಚಣಿ ಸೌಲಭ್ಯ: ಸರ್ಕಾರದ ಆದೇಶ ಸಂಖ್ಯೆ: ಎಫ್ ಡಿ (ಎಸ್ ಪಿಎಲ್) 4 ಪಿಇಟಿ 2005, ದಿನಾಂಕ: 31.3.2006 ರಂತೆ.

ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ : 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ : 40 ವರ್ಷಗಳು

Comments are closed.

Don`t copy text!