Shubhashaya News

‘ಸಿಎಂ ಸಿದ್ದರಾಮಯ್ಯಗೆ’ ಅನಾರೋಗ್ಯ ಹಿನ್ನೆಲೆ : 2 ದಿನ ‘ಅಧಿವೇಶನ’ ವಿಸ್ತರಣೆ ಸಾಧ್ಯತೆ

ಇಂದು ವಿಧಾನಸಭೆ ಬಜೆಟ್ ಅಧಿವೇಶನಕ್ಕೆ ತೆರೆ ಬೀಳಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನ ಎರಡು ದಿನ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕಿತ್ತು. ಆದರೆ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ವಿಧಾನಸಭೆ ಅಧಿವೇಶನ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸೋಮವಾರ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಹಾಗೂ ಮಂಗಳವಾರ ವಿಧಾನಸಭೆ ಅಧಿವೇಶನ ಎರಡು ದಿನ ವಿಸ್ತರಣೆ ಸಾಧ್ಯತೆ ಎನ್ನಲಾಗುತ್ತಿದೆ. ಇತ್ತೀಚಿಗೆ ಗಂಟಲು ನೋವಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾರೋಗ್ಯದಿಂದ ಬಳಲಿದ್ದರೂ.

Comments are closed.

Don`t copy text!