ಲೋಕಸಭಾ ಚುನಾವಣೆಯ ಪ್ರಯುಕ್ತ ಆಳಂದ ಮಂಡಲದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆಯನ್ನು ಪಟ್ಟಣದ ಆರ್ಯ ಸಮಾಜ ಕಲ್ಯಾಣ ಮಂಟಪದಲ್ಲಿ ದಿ. 23ನೇ ಶನಿವಾರದಂದು ಮಧ್ಯಾಹ್ನ 3 ಗಂಟೆಗೆ ಕರೆಯಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ಅವರು, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರಗಳನ್ನು ಚರ್ಚಿಸುವ ಕುರಿತು ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಕೇಂದ್ರ ಸಚಿವ ಭಗವಂತ ಖುಬಾ, ಮಾಜಿ ಶಾಸಕ ಸುಭಾಷ್ ಗುತ್ತೇದಾರ ಸೇರಿದಂತೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ಸಭೆಯ ನಂತರ ಆಳಂದ ಪಟ್ಟಣದ ಸಿದ್ದಲಿಂಗ ಶಿವಾಚಾರ್ಯರ ಹಿರೇಮಠ ಸಂಸ್ಥಾನಕ್ಕೆ, ಸರಸಂಬಾದ ದಿ. ಮಹಾಂತಪ್ಪ ಆಲೂರೆ ನಿವಾಸಕ್ಕೆ ಹಾಗೂ ಮಾದನಹಿಪ್ಪರ್ಗಾದ ಶಿವಲಿಂಗೇಶ್ವರ ವಿರಕ್ತ ಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಯುಕ್ತ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.
Comments are closed.