Shubhashaya News

`ಮತದಾನದ ಹಬ್ಬದಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿ’ : ಕನ್ನಡದಲ್ಲೇ ಪ್ರಧಾನಿ ಮೋದಿ ಮನವಿ!

ಲೋಕಸಭೆ ಚುಣಾವಣೆಗೆ ಇಂದು ರಾಜ್ಯದ ೧೪ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ದಾಖಲೆಯ ಸಂಖ್ಯೆಯಲ್ಲಿ ಮತದಾರರು ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ.

Comments are closed.

Don`t copy text!