Shubhashaya News

ಇಂದು ಆಳಂದ ಪಟ್ಟಣಕ್ಕೆ ಬಿವೈ ವಿಜೇಯೇಂದ್ರ

ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜೇಯೇಂದ್ರ ಅವರು ಇಂದು ಆಳಂದ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ.

ಸೋಮವಾರ ಆಳಂದ ಪಟ್ಟಣದ ಸ್ವಗೃಹದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಹಾಗೂ ಮಂಡಲ ಬಿಜೆಪಿ ಅಧ್ಯಕ್ಷ ಮಕಲ್ಲಿಕಾರ್ಜುನ ಕಂದಗೂಳೆ, ಆಳಂದ ಪಟ್ಟಣದ ಶ್ರೀರಾಮ ಮಾರುಕಟ್ಟೆ ಪ್ರದೇಶದ ಆವರಣದಲ್ಲಿ 30ನೇ ಏಪ್ರೀಲ್, ಮಂಗಳವಾರದಂದು ಸಾಯಂಕಾಲ 5 ಗಂಟೆಗೆ ಹಮ್ಮಿಕೊಂಡಿರುವ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ಬೀದರ್ ಲೋಕಸಭಾ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಕೇಂದ್ರ, ರಾಜ್ಯ ಹಾಗೂ ಜಿಲ್ಲೆಯ ಪ್ರಮುಖರು ಉಪಸ್ಥಿತರಿರಲಿದ್ದಾರೆ ಆದ್ದರಿಂದ ಆಳಂದ ಮತಕ್ಷೇತ್ರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೇಂದು ಮನವಿ ಮಾಡಿದ್ದಾರೆ.

Comments are closed.

Don`t copy text!