Shubhashaya News

ಆಳಂದ: ಇಡಿಸಿ ವಿತರಣೆಯಲ್ಲಿ ಅಧಿಕಾರಿಗಳ ಅಸಡ್ಡೆ

ಬೀದರ್ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಆಳಂದ ವಿಧಾನ ಸಭಾ ಕ್ಷೇತ್ರದಲ್ಲಿ ಅಂಚೆ ಮತಪತ್ರಗಳನ್ನು ವಿತರಿಸಲು ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರಿ ನೌಕರರಿಗೆ ಅಂಚೆ ಮತಪತ್ರಗಳನ್ನು ವಿತರಿಸಲು ವಿಳಂಬ ನೀತಿ ಅನುಸರಿಸುತ್ತಿರುವುದು ಅವರನ್ನು ಮತದಾನ ಪ್ರಕ್ರಿಯೆಯಿಂದ ವಂಚಿತರನ್ನಾಗಿ ಮಾಡುವ ಷಡ್ಯಂತ್ರವಾಗಿದೆ ಎನ್ನುವುದು ನಮ್ಮ ಅನುಮಾನ ಆದ್ದರಿಂದ ಚುನಾವಣಾಧಿಕಾರಿಗಳು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಅಂಚೆ ಮತಪತ್ರಗಳನ್ನು ವಿತರಿಸಲು ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Comments are closed.

Don`t copy text!