Shubhashaya News

ಅಂಗವಿಕಲರ ನೌಕರರ ಸಂಘದ ಅಧ್ಯಕ್ಷರಾಗಿ ನಂದೂರಕರ್ ನೇಮಕ

ಚಿತ್ತಾಪುರ: ಕರ್ನಾಟಕ ರಾಜ್ಯ ಸರ್ಕಾರಿ ಅಂವಿಕಲರ ನೌಕರರ ಸಂಘದ ಚಿತ್ತಾಪುರ ತಾಲೂಕು ಘಟಕಕ್ಕೆ ಅಧ್ಯಕ್ಷರನ್ನಾಗಿ ಶಿಕ್ಷಕ ದೇವಪ್ಪ ನಂದೂರಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ದಿಲೀಪಸಿಂಗ್, ಪ್ರಧಾನ ಕಾರ್ಯದರ್ಶಿ ಸಂತೋಷ ಧಾಯಗೋಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಂಘದ ಅಧ್ಯಕ್ಷ ಆರ್. ಇಂದ್ರೇಶ ಮತ್ತು ಉಪಾಧ್ಯಕ್ಷ ಶಾಂತಪ್ಪ ಸಂಗಾವಿ ನೇತೃತ್ವದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚಿತ್ತಾಪುರ ಪಟ್ಟಣದ ಬಸವ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಉತ್ಸಾಹಿ ಮತ್ತು ಆದರ್ಶ ಶಿಕ್ಷಕ ದೇವಪ್ಪ ನಂದೂರಕರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದರು.
ಈ ಗುರುತರ ಜವಾಬ್ದಾರಿ ವಹಿಸಿಕೊಂಡು ಅಂಗವಿಕಲರ ಸರ್ಕಾರಿ ನೌಕರರನ್ನು ಗುರುತಿಸಿ ಸಂಘದ ಸದಸ್ಯರನ್ನಾಗಿ ಮಾಡಿ ಅವರನ್ನು ಒಂದೇ ವೇದಿಕೆಯಡಿಯಲ್ಲಿ ತಂದು ಸಂಘಟನೆ ಭಲ ಪಡಿಸಬೇಕು. ಜೊತೆಗೆ ಅನ್ಯಾಯವಾದಾಗ ಹೋರಾಟದ ಹೆಜ್ಜೆ ಇಡುವ ಮೂಲಕ ಸರ್ಕಾರದ ಸೌಲಭ್ಯಗಳ ಲಾಭ ದೊರಕಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧ್ಯಕ್ಷ ದಿಲೀಪಸಿಂಗ್ ತಿಳಿಸಿದ್ದಾರೆ.
ಇದೇ ವೆಳೆ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಸುರೇಶಕುಮಾರ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.