Shubhashaya News

ಗುತ್ತೇದಾರ ಶಾಲೆಯ ವಿದ್ಯಾರ್ಥಿ ತಾಲೂಕಿಗೆ ಪ್ರಥಮ

ಆಳಂದ ಪಟ್ಟಣದ ಎಸ್‍ಆರ್‍ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ಎಸ್‍ಆರ್‍ಜಿ ಆಂಗ್ಲ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರದೀಪ ರಾಜೇಂದ್ರ ಕಾಸರ ಶೇ. 98.08% ಅಂಕಗಳನ್ನು ಪಡೆಯವುದರ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ.

ಶಾಲೆಯಿಂದ ಪರೀಕ್ಷೆ ಬರೆದ 75 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು. ಶಾಲೆಗೆ ಶೇ. 94.6% ಫಲಿತಾಂಶ ಲಭಿಸಿದೆ. ಶಾಲೆಯ ಗುರುರಾಜ ಮಲ್ಲಿನಾಥ ನಾಮಣೆ ಶೇ. 95.84%, ಸುಯೋಗ ಯೋಗೇಶ ಬಂಡಗರ ಶೇ. 94.4% ಅಂಕಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ, ಕಾರ್ಯದರ್ಶಿ ಹರ್ಷಾನಂದ ಗುತ್ತೇದಾರ, ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚಸನಸೂರ, ಪ್ರಾಚಾರ್ಯೆ ಜ್ಯೋತಿ ವಿಶಾಕ್ ಸೇರಿದಂತೆ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಉತ್ತಮ ಶ್ರೇಣಿಯಲ್ಲಿ ಪಾಸಾದ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸುತ್ತಿರುವ ಸಿಬ್ಬಂದಿಗಳಿಗೂ ಅಭಿನಂದನೆಗಳು. ನಮ್ಮ ಶಾಲೆಯಲ್ಲಿ ಕಲಿಕಾ ವಾತಾವರಣವನ್ನು ಎತ್ತರಕ್ಕೆ ಕೊಂಡುಯ್ಯುವುದಕ್ಕೆ ನೂತನ ವಿಧಾನಗಳನ್ನು ಅಳವಡಿಸಿಕೊಂಡಿದ್ದೇವೆ ಇದರ ಪರಿಣಾಮ ಈಗ ಗೋಚರಿಸುತ್ತಿದೆ.-ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ,

Comments are closed.

Don`t copy text!