Shubhashaya News

Job Alert : ರಾಜ್ಯ ಸಾರಿಗೆ ಇಲಾಖೆಯಲ್ಲಿ 9,000 ಹುದ್ದೆಗಳ ಭರ್ತಿಗೆ ಗ್ರೀನ್‌ ಸಿಗ್ನಲ್!‌

ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಚಾಲಕ, ನಿರ್ವಾಹಕ ಸೇರಿ ಒಟ್ಟು 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಮಾಹತಿ ನೀಡಿರುವ ಸಚಿವ ರಾಮಲಿಂಗ ರೆಡ್ಡಿ, ಸಾರಿಗೆ ಇಲಾಖೆಯಲ್ಲಿ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಉಳಿದವು ನೇಮಕಾತಿ ಪ್ರಕ್ರಿಯೆಯಲ್ಲಿವೆ. 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಆಗಿದೆ ತಿಳಿಸಿದ್ದಾರೆ.

ಇನ್ನು ಸಾರಿಗೆ ಬಸ್‌ ಪ್ರಯಾಣ ದರ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವ ನಿರ್ಧಾರ ಕೈಗೊಂಡಿಲ್ಲ. ನಾಲ್ಕು ನಿಗಮಗಳಿಂದ ಪ್ರಸ್ತಾವ ಬಂದ ನಂತರ ಟಿಕೆಟ್ ದರ ಹೆಚ್ಚಳದ ಬಗ್ಗೆ ಪರಿಶೀಲಿಸುವುದಾಗಿ ಎಂದು ಹೇಳಿದ್ದಾರೆ.

 

Comments are closed.

Don`t copy text!