Shubhashaya News

BIG UPDATE : ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್‌ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡ ಆರೋಪಿಗಳು!

ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನ ಫಾರ್ಮ್‌ ಹೌಸ್‌ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್‌ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

ದರ್ಶನ್‌ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ನಾಲ್ವರು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ರೇಣುಕಾಸ್ವಾಮಿಗೆ ಚಿತ್ರದುರ್ಗದಿಂದ ಬೆಂಗಳೂರಿನ ಕಾಮಾಕ್ಷಿ ಪಾಳ್ಯಕ್ಕೆ ಕರೆಸಿಕೊಂಡು ನಟ ದರ್ಶನ್‌ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ.

ಪವಿತ್ರಗೌಡನಿಗೆ ಆಶ್ಲೀಲ ಮೇಸೆಜ್‌ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್‌ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿದೆ.

Comments are closed.

Don`t copy text!