Shubhashaya News

ಬಕ್ರೀದ್ ಪ್ರಯುಕ್ತ ರಾಜ್ಯದಲ್ಲಿ ಒಂಟೆ, ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ

ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ/ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.

ಶನಿವಾರದಂದು ತಮ್ಮ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಬ್ಬದ ಸಂದರ್ಭದಲ್ಲಿ ಹೊರ ರಾಜ್ಯಗಳಿಂದ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಾಣಿಕೆ ಮಾಡುವುದು ಅಪರಾಧವಾಗಿದೆ. ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ಉಲ್ಲಂಘನೆ ಮಾಡಬಾರದು. ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರಿಕೆ ವಹಿಸುವುದು ಕಡ್ಡಾಯವಾಗಿದ್ದು, ಕಸ ವಿಲೇವಾರಿ ವಾಹನಗಳಿಗೆ ತ್ಯಾಜ್ಯ ನೀಡಬೇಕು ಎಂದು ಸೂಚಿಸಿದರು.

ಕಾನೂನು ಬಾಹಿರವಾಗಿ ಯಾರಾದರೂ ಒಂಟೆ, ಗೋಹತ್ಯೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ, ಪೆÇಲೀಸ್ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯತಿಗಳಿಗೆ ಮಾಹಿತಿಯನ್ನು ನೀಡಬಹುದು ಎಂದರು.

Comments are closed.

Don`t copy text!