Shubhashaya News

ಕೋಡ್ಲಾ: ಸಮಾಜ ವಿಜ್ಞಾನ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ (ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ) ವ್ಯಾಪ್ತಿಯಲ್ಲಿ ಬರುವ ಸೇಡಂ ತಾಲೂಕಿನ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿಯಿರುವ ಸಮಾಜ ವಿಜ್ಞಾನ (ಆಂಗ್ಲ ಮಾಧ್ಯಮ) ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ವಸತಿ ಶಾಲೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಬಿ.ಎ. ಬಿ.ಇಡಿ. ಪಾಸಾಗಿರಬೇಕು. ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ಶಾಲಾ ಹಂತದಲ್ಲಿ ನಿಯಮಾವಳಿಗೆ ಒಳಪಟ್ಟು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನಿವೃತ್ತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಹ ವಿದ್ಯಾರ್ಥಿಗಳು ಸಂಬಂಧಟಪಟ್ಟ ಶೈಕ್ಷಣಿಕ ದಾಖಲೆಗಳೊಂದಿಗೆ 2021ರ ಏಪ್ರಿಲ್ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರನ್ನು ಹಾಗೂ ಮೊಬೈಲ್ ಸಂಖ್ಯೆ 8747924789ಗೆ ಸಂಪರ್ಕಿಸಲು ಕೋರಲಾಗಿದೆ.
3
Leave A Reply

Your email address will not be published.