Shubhashaya News

ಜೀವನದಲ್ಲಿ ಕನಸು ಗುರಿ ಮುಖ್ಯ- ಡಾ. ಶರಣಪ್ಪ ಢಗೆ

ಆಳಂದ ಪಟ್ಟಣದ ಪ್ರತಿಷ್ಠಿತ ಎಸ್‍ಆರ್‍ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ಎಸ್‍ಆರ್‍ಜಿ ಆಂಗ್ಲ್ ಮಾಧ್ಯಮ ಶಾಲೆಯ ವಾರ್ಷಿಕೋತ್ಸವವನ್ನು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಉದ್ಘಾಟಿಸಿದರು. ಸೂರ್ಯಕಾಂತ ಮದಾನೆ, ಹರ್ಷಾ ಗುತ್ತೇದಾರ, ರಾಘವೇಂದ್ರ ಚಿಂಚನಸೂರ, ಜ್ಯೋತಿ ವಿಶಾಖ ಸೇರಿದಂತೆ ಇತರರು ಇದ್ದರು.

ಆಳಂದ ಪಟ್ಟಣದ ಪ್ರತಿಷ್ಠಿತ ಎಸ್‍ಆರ್‍ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ಎಸ್‍ಆರ್‍ಜಿ ಆಂಗ್ಲ್ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದಲ್ಲಿ ಮಕ್ಕಳು ಪ್ರದರ್ಶಿಸಿದ ರಾಮಾಯಣ ದರ್ಶನ ನೋಡುಗರ ಗಮನ ಸೆಳೆಯಿತು.

ಜೀವನದಲ್ಲಿ ನಾವು ಅಂದುಕೊಂಡದ್ದನ್ನು ಸಾಧಿಸಲು ಕನಸು ಮತ್ತು ಗುರಿ ಮುಖ್ಯವಾಗಿದೆ ಅವನ್ನು ಸಾಧಿಸಲು ಕಠಿಣ ಪರಿಶ್ರಮದ ಅವಶ್ಯಕತೆಯಿದೆ ಎಂದು ಕಲಬುರಗಿ ನಗರ ಪೋಲಿಸ್ ಆಯುಕ್ತ ಡಾ. ಶರಣಪ್ಪ ಎಸ್ ಢಗೆ ಅಭಿಪ್ರಾಯಪಟ್ಟರು.

ಶನಿವಾರ ಆಳಂದ ಪಟ್ಟಣದ ಪ್ರತಿಷ್ಠಿತ ಎಸ್ ಆರ್ ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ಎಸ್‍ಆರ್‍ಜಿ ಆಂಗ್ಲ್ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಧುನಿಕ ಕಾಲದಲ್ಲಿ ಶಿಕ್ಷಣ ಕಲಿಸುವ, ಕಲಿಯುವ ವಿಧಾನ ಬದಲಾಗಿದೆ. ಆಧುನಿಕ ಬೋಧನಾ ವಿಧಾನಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚಿಸಿವೆ ಈ ವಿಧಾನದಲ್ಲಿ ಶಿಕ್ಷಕರ ಮತ್ತು ಪಾಲಕರ ಮಹತ್ವ ಹೆಚ್ಚಾಗಿದೆ ಆದ್ದರಿಂದ ಎಲ್ಲರೂ ಜವಾಬ್ದಾರಿಯಿಂದ ನಮ್ಮ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದರು.

ಪ್ರತಿಭೆಗೆ ತಕ್ಕಂತೆ ಅವಕಾಶಗಳನ್ನು ಕಲ್ಪಿಸಬೇಕು ಈ ನಿಟ್ಟಿನಲ್ಲಿ ದೈಹಿಕ ಮತ್ತು ಮಾನಸಿಕ ಶ್ರಮಕ್ಕೆ ಒತ್ತು ಕೊಡುವ ಕೆಲಸ ಮಾಡಬೇಕಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಕೆಲಸದಲ್ಲಿ ತೊಡಗಿರುವ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ. ಇಂದಿನ ಮಕ್ಕಳಿಗೆ ಒತ್ತಡ ರಹಿತ ವಾತಾವರಣವನ್ನು ಸೃಷ್ಟಿಸಿ ಕಲಿಕೆಯನ್ನು ಆನಂದದಿಂದ ಅಸ್ವಾದಿಸುವಂತೆ ಮಾಡುವುದು ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ನುಡಿದರು.

ಜೀವನದಲ್ಲಿ ಬರುವ ಅಡೆತಡೆಗಳನ್ನು ಸರಿಪಡಿಸಿಕೊಂಡು ಅವಕಾಶಗಳನ್ನಾಗಿ ಪರಿವರ್ತಿಸಿಕೊಳ್ಳಬೇಕು. ಇಂದಿನ ಮಕ್ಕಳಿಗೆ ದುಬಾರಿಯಾದ ವಸ್ತುಗಳ ಅವಶ್ಯಕತೆಯಿಲ್ಲ ಆದರೆ ತಮ್ಮ ದುಬಾರಿಯಾದ ಸಮಯದ ಅವಶ್ಯಕತೆಯಿದೆ. ಪ್ರತಿದಿನ ಕೆಲವು ಹೊತ್ತು ಮಕ್ಕಳ ಜೊತೆ ಕುಟುಂಬದ ಜೊತೆ ಕಳೆಯುವುದನ್ನು ಅಳವಡಿಸಿಕೊಳ್ಳಿ ಎಂದು ಹೇಳಿದರು.

ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೂರ್ಯಕಾಂತ ಮದಾನೆ ಮಾತನಾಡಿ, ಶಿಕ್ಷಣ ವ್ಯವಸ್ಥೆಯ ಸಮಗ್ರ ಸುಧಾರಣೆಗಾಗಿ ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದ ಅವಶ್ಯಕತೆಯಿದೆ ಈ ನಿಟ್ಟಿನಲ್ಲಿ ಸಮುದಾಯವು ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯ ಕಾರ್ಯದರ್ಶಿ ಹರ್ಷಾ ಗುತ್ತೇದಾರ ಮಾತನಾಡಿ, ಜೀವನದಲ್ಲಿ ಕನಸು ಮತ್ತು ಗುರಿ ಬಹಳ ಮುಖ್ಯ. ಅತಿ ಆಸೆಯಿಂದ ಮಾನವೀಯ ಸಂಬಂಧಗಳು ದೂರವಾಗುತ್ತಿವೆ. ಹೀಗಾಗಿ ಹೃದಯ ಶ್ರೀಮಂತಿಕೆಯಿಂದ ಮಾತ್ರ ಶಾಂತಿ ಸಾಮರಸ್ಯ ಮೂಡಲು ಸಾಧ್ಯ ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಧರ್ಮ ಸಂಸ್ಕøತಿ ಮತ್ತು ಆದರ್ಶ ಉಳಿಸಿ ಬೆಳೆಸುವ ಅಗತ್ಯವಿದೆ. ಸತ್ಯ ಸಾಧಿಸಲು ಹೊರಟವರಿಗೆ ಸಂಕಷ್ಟ ತಪ್ಪಿದ್ದಲ್ಲ. ಜನರ ನಿಂದನೆಗಳು ಇದ್ದೆ ಇರುತ್ತವೆ. ಅವುಗಳನ್ನು ಲೆಕ್ಕಿಸದೇ ಗಟ್ಟಿತನದಿಂದ ನಡೆದಾಗ ಗುರಿ ಮುಟ್ಟಲು ಸಾಧ್ಯ. ಕಣ್ಣಿಲ್ಲದವನು ಕುರುಡನಲ್ಲ. ದೋಷ ಮರೆಮಾಚುವವನು ನಿಜವಾದ ಕುರುಡ. ಅನುಭವದಿಂದ ಸಿಗುವ ಜ್ಞಾನ ಯಾವುದೇ ವಿಶ್ವವಿದ್ಯಾಲಯದಿಂದ ಪಡೆಯಲು ಸಾಧ್ಯವಿಲ್ಲ ಕ್ರೀಯಾಶೀಲ ವ್ಯಕ್ತಿಗಳು ಸಾಧಿಸುವ ಛಲನಿμÉ್ಠ ಹೊಂದಿರುತ್ತಾರೆ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಾಚಾರ್ಯೆ ಜ್ಯೋತಿ ವಿಶಾಖ್ ವಾರ್ಷಿಕ ವರದಿ ಮಂಡಿಸಿದರು.

ಸಹ ಶಿಕ್ಷಕ ಆನಂದ ಸ್ವಾಗತಿಸಿದರೆ, ವಿದ್ಯಾರ್ಥಿನಿಯರಾದ ಸೇವಂತಾ, ತನ್ವಿ ನಿರೂಪಿಸಿದರು. ಸಹ ಶಿಕ್ಷಕಿ ಪ್ರಿಯಾಂಕಾ ವಂದಿಸಿದರು.

ನಂತರ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ಆಕರ್ಷಕ ನೃತ್ಯ, ರೂಪಕಗಳನ್ನು ಪ್ರದರ್ಶಿಸಿದರು. ಶಾಲೆಯ ಸುಮಾರು 300 ವಿದ್ಯಾರ್ಥಿಗಳು ಬೆಳಕಿನ ಕಿರಣ ಹಾಗೂ ವಿವಿಧ ಸನ್ನಿವೇಶಗಳನ್ನು, ವಿಭಿನ್ನ ಶೈಲಿಗಳನ್ನು ಬಳಸಿ ಸೃಷ್ಟಿಸಿ ಪ್ರಸ್ತುತಪಡಿಸಿದ ರಾಮಾಯಣ ದರ್ಶನ ನೋಡುಗರ ಮನ ಸೆಳೆಯಿತು.

ಶಾಲೆಯ ವಿದ್ಯಾರ್ಥಿ ತಾಲೂಕಿಗೆ ಪ್ರಥಮ ಬಂದಿದ್ದು ಖುಷಿಯ ವಿಚಾರ. ಮುಂದಿನ ದಿನಗಳಲ್ಲಿ ಈ ಭಾಗದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ರ್ಯಾಂಕ್ ಬಂದು ಜಿಲ್ಲೆ ಮತ್ತು ತಾಲೂಕಿಗೆ ಕೀರ್ತಿ ತರಲಿ- ಡಾ. ಶರಣಪ್ಪ ಢಗೆ, ಐಪಿಎಸ್, ಪೊಲೀಸ್ ಆಯುಕ್ತರು, ಕಲಬುರಗಿ ನಗರ.

ಉನ್ನತ ಮಟ್ಟದ ಪರೀಕ್ಷೆಗಳಾದ ಯುಪಿಎಸ್‍ಸಿ ಪರೀಕ್ಷೆ ತೆಗೆದುಕೊಳ್ಳುವ ತಾಲೂಕಿನ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಸಹಕಾರ ನೀಡಲಾಗುವುದು- ಹರ್ಷಾ ಗುತ್ತೇದಾರ, ಸಂಸ್ಥೆಯ ಕಾರ್ಯದರ್ಶಿ, ಎಸ್‍ಆರ್‍ಜಿ ಫೌಂಡೇಶನ್, ಆಳಂದ.

Leave A Reply

Your email address will not be published.