Shubhashaya News

ವಿಜಯಪುರದಲ್ಲಿ `SSLC’ ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಓರ್ವ ಸಾವು : ಮೂವರು ವಿದ್ಯಾರ್ಥಿನಿಯರಿಗೆ ಗಾಯ

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಕಗ್ಗೋಡೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ತೆಲಂಗಾಣದ ಮೂಲದ ಲಾರಿ ಡಿಕ್ಕಿಯಾದ ಪರಿಣಾಮ ವೆಂಕು ಚವ್ಹಾಣ್ (42) ಸ್ಥಳದಲ್ಲೇ ಸಾವನ್ನಪ್ಪಿದ್ದು, ಐಶ್ವರ್ಯ, ಪ್ರೀತಿ, ಶ್ವೇತಾ ಗಾಯಗೊಂಡಿದ್ದಾರೆ.

ಸದ್ಯ ಗಾಯಾಳು ವಿದ್ಯಾರ್ಥಿನಿಯರನ್ನು ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.